ಬೆಂಗಳೂರು
ರೇಷ್ಮೆಗೂಡು ದರ ಕುಸಿತ ಖಂಡಿಸಿ ಸಾವಿರಾರು ರೇಷ್ಮೆ ಬೆಳೆಗಾರರು ನಗರದಲ್ಲಿ ಶುಕ್ರವಾರ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿ ಸೇರಿ ಪ್ರತಿಭಟನೆ ನಡೆಸಿದ ರೇಷ್ಮೆ ಬೆಳೆಗಾರರು ರೇಷ್ಮೆ ಗೂಡಿಗೆ ಸರಿಯಾದ ಬೆಲೆ ನಿಗದಿಪಡಿಸುವಂತೆ ರಾಜ್ಯ ಸರ್ಕಾರ ಹಾಗೂ ರೇಷ್ಮೆ ಸಚಿವರ ವಿರುದ್ಧ ಘೋಷಣೆಯನ್ನು ಕೂಗಿ ತೀವ್ರ ಪ್ರತಿಭಟನೆ ನಡೆಸಿದರು.
ರೇಷ್ಮೆ ಗೂಡಿಗೆ ಮಾರುಕಟ್ಟೆಯಲ್ಲಿ ಕಳೆದ ಅನೇಕ ದಿನಗಳಿಂದ ದರ ನಿರಂತರವಾಗಿ ಕುಸಿಯುತ್ತಿದೆ. ಸರ್ಕಾರ ರೇಷ್ಮೆ ಬೆಳೆಗಾರರಿಗೆ ನೀಡುತ್ತಿರುವ ಪೆÇ್ರೀತ್ಸಾಹಧನ ರೈತರಿಗೆ ದೊರೆಯುತ್ತಿಲ್ಲ ಎಂದು ಬೆಳೆಗಾರರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಬಸವರಾಜು ಸಮಿತಿ ವರದಿಯಂತೆ, ರೇಷ್ಮೆ ಗೂಡಿಗೆ ಕನಿಷ್ಟ ಬೆಂಬಲ ಬೆಲೆ ನಿಗದಿಪಡಿಸಬೇಕು ಎಂದು ಈ ವೇಳೆ ರೈತರು ಆಗ್ರಹಿಸಿದರು.
ಬೆಳಿಗ್ಗೆ 10 ಗಂಟೆಗೆ ಮಾರುಕಟ್ಟೆಯಲ್ಲಿ ಗೂಡು ಹರಾಜು ಆರಂಭಗೊಳ್ಳುತ್ತಿದ್ದಂತೆ, ಪ್ರತಿಭಟನೆ ನಡೆಸುತ್ತಿದ್ದ ರೈತರು, ಸುಮಾರು 10 ಗಂಟೆಯ ವೇಳೆಗೆ ಮಾರುಕಟ್ಟೆಗೆ ಪುನರ್ ಪ್ರವೇಶ ಮಾಡಿದರು. ರೈತರ ಈ ಪ್ರತಿಭಟನೆಯಿಂದ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ಥಗೊಂಡಿತು.