ಬೆಂಗಳೂರು
ಜಾಗತಿಕವಾಗಿ ತೀವ್ರ ಆತಂಕ ಸೃಷ್ಟಿಸಿರುವ ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ವಸತಿ ಶಾಲೆಗಳನ್ನು ಕ್ವಾರಂಟೀನ್ ಗಳನ್ನಾಗಿ ಬಳಕೆ ಮಾಡಿಕೊಳ್ಳುವಂತೆ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದ್ದಾರೆ.
ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ಈಗಾಗಲೇ ಬೇಸಿಗೆ ರಜೆಯನ್ನು ಘೋಷಣೆ ಮಾಡಿದ್ದು, ಪ್ರಸ್ತುತ ಯಾವ ವಿದ್ಯಾರ್ಥಿಗಳು ವಸತಿ ಶಾಲೆಗಳಲ್ಲಿ ಇಲ್ಲ. ರಾಜ್ಯದ ಎಲ್ಲಾ ಜಿಲ್ಲೆ, ತಾಲೂಕುಗಳಲ್ಲಿರುವ ವಸತಿ ಶಾಲೆಗಳು ಹಾಗೂ ವಿದ್ಯಾರ್ಥಿ ನಿಲಯಗಳು ವಿಶಾಲವಾದ ಸ್ಥಳದಲ್ಲಿ ಸುಸಜ್ಜಿತವಾಗಿದ್ದು, ಪ್ರತ್ಯೇಕ ಕೊಠಡಿಗಳು, ಅಡುಗೆ ಮನೆ, ಶೌಚಾಲಯ, ಸ್ನಾನಗೃಹ, ವಾಚನಾಲಯ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಹೊಂದಿವೆ ಎಂದು ಹೇಳಿದ್ದಾರೆ.
ಈ ವಸತಿ ಶಾಲೆಗಳು ಹಾಗೂ ವಿದ್ಯಾರ್ಥಿ ನಿಲಯಗಳು ಜನ ಸಂದಣಿಯಿಂದ ದೂರ ಪ್ರದೇಶಗಳಲ್ಲಿದ್ದು, ಇಲ್ಲಿ ಕೊರೋನಾ ಸೋಂಕಿತರನ್ನು ದಿಗ್ಭಂಧನದಲ್ಲಿಟ್ಟರೆ ಸೋಂಕು ನಾಗರಿಕ ಸಮುದಾಯಕ್ಕೆ ವ್ಯಾಪಿಸುವ ಆತಂಕ ಇರುವುದಿಲ್ಲ ಎಂದು ಹೇಳಿದ್ದಾರೆ.
ಅಗತ್ಯರುವ ಸಮೀಪದ ಪ್ರದೇಶಗಳಲ್ಲಿ ಯಾವುದೇ ವೆಚ್ಚವಿಲ್ಲದೇ ಕ್ವಾರಂಟೀನ್ ಗಳನ್ನಾಗಿ ಪರಿವರ್ತಿಸಬಹುದಾಗಿದೆ. ಜಿಲ್ಲಾಡಳಿತವು ಈ ವಸತಿ ಶಾಲೆಗಳನ್ನು ಮುಕ್ತವಾಗಿ ಬಳಕೆ ಮಾಡಬಹುದು ಗೋವಿಂದ ಕಾರಜೋಳ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ