ಬೆಂಗಳೂರು
ಮಲ್ಪೆ ಸಮುದ್ರ ತೀರದಿಂದ ನಾಪತ್ತೆಯಾಗಿರುವ ಮೀನುಗಾರರ ಪತ್ತೆಗೆ ಮಹಾರಾಷ್ಟ್ರ ಸರ್ಕಾರದ ನೆರವು ಕೋರುವಂತೆ ಸಚಿವ ಸಂಪುಟದಲ್ಲಿ ಒತ್ತಾಯಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
ವಿಧಾನಸೌಧದಲ್ಲಿಂದು ಮಾತನಾಡಿದ ಅವರು, ಮೀನುಗಾರರು ಮಹಾರಾಷ್ಟ್ರದ ರತ್ನಗಿರಿ ಪ್ರದೇಶದಲ್ಲಿ ಕಾಣೆಯಾಗಿದ್ದಾರೆ.ಹಾಗಾಗಿ ಮಲ್ಪೆ ಮೀನುಗಾರರ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ರತ್ನಗಿರಿ ಮೀನುಗಾರರ ಸಂಘಟನೆ ಪದಾಧಿಕಾರಿಗಳನ್ನು ವಿಚಾರಣೆಗೊಳಪಡಿಸಬೇಕು. ಈ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮಕೈಗೊಂಡು ಮಹಾರಾಷ್ಟ್ರ ಸರ್ಕಾರದ ಜೊತೆ ಮಾತನಾಡುವಂತೆ ಸಭೆಯಲ್ಲಿ ಒತ್ತಾಯಿಸಲಾಗುವುದು ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ