ತಾರತಮ್ಯ ನೀತಿ : ದಯಾಮರಣಕ್ಕೆ ಅರ್ಜಿ ಸಲ್ಲಿಸಿದ ನಿವೃತ್ತ ಶಿಕ್ಷಕ..!

ರಾಯಚೂರು:

      ಸರ್ಕಾರದ ತಾರತಮ್ಯ ನೀತಿಗಳಿಂದ ನೊಂದ ಅನುದಾನಿತ ಶಾಲೆಯ ನಿವೃತ್ತ ಶಿಕ್ಷಕರೊಬ್ಬರು ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ ಎಂದು ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ.

ಇಲ್ಲಿನ ಸರಕಾರಿ ನೌಕರರ ಗೃಹ ನಿರ್ಮಾಣ ಮಂಡಳಿ ಸಹಕಾರ ಸಂಘದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿ ಇತ್ತೀಚೆಗೆ ನಿವೃತ್ತಿ ಹೊಂದಿರುವ ಸಂಗಯ್ಯಸ್ವಾಮಿ ಸೊಪ್ಪಿಮಠ ದಯಾಮರಣ ಕೋರಿದವರು. 2006ರ ಬಳಿಕ ಸರಕಾರದ ಅನುದಾನಕ್ಕೆ ಒಳಪಟ್ಟ ಶಾಲೆಗಳ ಶಿಕ್ಷಕರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ನಿವೃತ್ತಿಯಾಗಿ ವರ್ಷ ಕಳೆದರೂ ಅನುದಾನಿತ ಶಾಲೆಗಳ ಶಿಕ್ಷಕರ ಗಳಿಕೆ ರಜೆಯನ್ನು ನಗದೀಕರಿಸಲು ಆಗುತ್ತಿಲ್ಲ. ಆದರೆ, ಸರಕಾರಿ ಶಾಲೆಗಳ ಶಿಕ್ಷಕರು ಕೇವಲ 10 ದಿನಗಳೊಳಗೆ ಗಳಿಕೆ ರಜೆಯನ್ನು ನಗದೀಕರಿಸಿಕೊಂಡಿದ್ದಾರೆ. ಈ ಕುರಿತು ಶಿಕ್ಷಣ ಸಚಿವ ಸುರೇಶಕುಮಾರ್‌ ಅವರಿಗೆ ಜೂ. 14, 2020ರಂದು ಪತ್ರ ಬರೆದಿದ್ದು, ಸಮಸ್ಯೆಯನ್ನು ಪರಿಹರಿಸುವ ಭರವಸೆ ಸಚಿವರಿಂದ ಸಿಕ್ಕಿತ್ತು. ಆದರೆ, ಈವರೆಗೂ ಸ್ಪಂದಿಸಿಲ್ಲವಾದ್ದರಿಂದ ದಯಾಮರಣಕ್ಕೆ ಅವಕಾಶ ನೀಡುವಂತೆ ಕೋರಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap