ಬೆಂಗಳೂರು:
ಗಣೇಶ್ ಹಬ್ಬ ಆಚರಣೆಗೆ ಅಡ್ಡಿಯಾಗಿದ್ದ ಮಾರ್ಗಸೂಚಿ ಪರಿಷ್ಕರಣೆ ಮಾಡಲಾಗಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ .ಕೊರೋನಾ ಹಿನ್ನೆಲೆಯಲ್ಲಿ ಗಣೇಶೋತ್ಸವ ಆಚರಣೆಗೆ ಅಡ್ಡಿಯುಂಟಾಗಲಿದೆ ಎಂದು ಸಾರ್ವಜನಿಕರಿಂದ ವ್ಯಕ್ತವಾದ ಆಕ್ಷೇಪಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ಪರಿಷ್ಕರಿಸಿದೆ. ಸಾರ್ವಜನಿಕವಾಗಿ ಗಣೇಶ ಮೂರ್ತಿ ಪ್ರತಿಷ್ಠಾಪನೆ, ಪೂಜೆ ಪುನಸ್ಕಾರಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ಪರಿಷ್ಕೃತ ಮಾರ್ಗಸೂಚಿಯಲ್ಲಿ 7 ಷರತ್ತುಗಳ ವಿಧಿಸಿ ಸಾರ್ವಜನಿಕವಾಗಿ ಗಣೇಶೋತ್ಸವ ಆಚರಣೆಗೆ ಅನುವು ಮಾಡಿಕೊಡಲಾಗಿದೆ.
1. ಗಣೇಶ ಚತುರ್ಥಿಯನ್ನು ಸರಳ ರೀತಿಯಲ್ಲಿ ಭಕ್ತಿ ಪೂರ್ವಕವಾಗಿ ತಮ್ಮ ಮನೆಗಳಲ್ಲಿ/ಸರ್ಕಾರಿ/ಖಾಸಗಿ /ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಟ ಸಂಖ್ಯೆಯಲ್ಲಿ ಆಚರಿಸಬಹುದು.
2. ಸಾರ್ವಜನಿಕ ಸ್ಥಳದಲ್ಲಿ ಕನಿಷ್ಟ 4 ಅಡಿಗೆ ಮೀರದಂತೆ ಹಾಗೂ ಮನೆಗಳಲ್ಲಿ 2 ಅಡಿಗೆ ಮೀರದಂತೆ ಮೂರ್ತಿಯನ್ನು ಪ್ರತಿಷ್ಠಾಪಿಸುವುದು.
3. ಪಾರಂಪರಿಕ ಗಣೇಶೋತ್ಸವ,ಸಮಿತಿಗಳು,ಮಂಡಳಿಗಳು ಮೂರ್ತಿ ಪ್ರತಿಷ್ಠಾಪನೆಗೆ ಸ್ಥಳೀಯ ಆಡಳಿತ/ಕಾರ್ಪುರೇ ಷನ್/ಮುನಿಸಿಪಲ್ ಗಳಿಂದ ಪೂರ್ವಾನುಮತಿ ಪಡೆದು ಉತ್ಸವ ಆಚರಣೆಗೆ ಅವಕಾಶ ನೀಡಲಾಗಿದೆ.ಪ್ರತಿ ವಾರ್ಡ್ ಗೆ 4. ಒಂದರಂತೆ,ಗ್ರಾಮಕ್ಕೆ ಒಂದರಂತೆ ಸಾರ್ವಜನಿಕವಾಗಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಉತ್ಸವ ಆಚರಿಸಬಹುದು.
4. ಗಣೇಶೋತ್ಸವ ಪ್ರತಿಷ್ಠಾಪನೆ ಸ್ಥಳದಲ್ಲಿ ಯಾವುದೇ ರೀತಿಯ ಮನೋರಂಜನೆ, ಸಾಂಸ್ಕೃತಿಕ ಕಾರ್ಯಕ್ರಮ, ಸಂಗೀತ,ನೃತ್ಯ ಕಾರ್ಯಕ್ರಮ ಆಯೋಜನೆಗೆ ನಿಷೇಧವಿದೆ.
5. ಸಾರ್ವಜನಿಕ ಸ್ಥಳದಲ್ಲಿ ಗಣೇಶ್ ಪ್ರತಿಷ್ಠಾಪನೆ ಮಾಡುವ ಸ್ಥಳದಲ್ಲಿ 20 ಜನಕ್ಕೆ ಸೀಮಿತವಾಗಿ ಆವರಣ ನಿರ್ಮಿಸುವುದು.20ಕ್ಕಿಂತ ಹೆಚ್ಚಿನ ಭಕ್ತರು,ಜನರು ಸೇರುವುದಕ್ಕೆ ಅವಕಾಶವಿಲ್ಲ.
6. ಗಣೇಶ್ ಮೂರ್ತಿ ತುರುವಾಗ ಹಾಗೂ ವಿಸರ್ಜನೆ ವೇಳೆ ಮೆರವಣಿಗೆ,ಡಿಜೆ ಸೇರಿದಂತೆ ಯಾವುದೇ ರೀತಿಯ ಆಡಂಬರ,ಗದ್ದಲಕ್ಕೆ ಸಂಪೂರ್ಣ ನಿಷೇಧ ವಿಧಿಸಲಾಗಿದೆ.
ಮನೆಯಲ್ಲಿ ಗಣೇಶ ಪ್ರತಿಷ್ಠಾಪಿಸಿ ಪೂಜಿಸಿದವರು ಮನೆಯಲ್ಲಿ ಮೂರ್ತಿಯನ್ನು ವಿಸರ್ಜಿಸಿ.ಸಾರ್ವಜನಿಕವಾಗಿ ಪ್ರತಿಷ್ಠಾಪಿಸಿದವರು ಸಮೀಪದ ಮೊಬೈಲ್ ಟ್ಯಾಂಕರ್ ಗಳು,ಕೃತಕ ವಿಸರ್ಜನಾ ಟ್ಯಾಂಕರ್ ಗಳಲ್ಲಿ ಸ್ಥಳೀಯ ಸಂಸ್ಥೆಗಳು ನಿರ್ಮಿಸಿರುವ ಹೊಂಡಗಳಲ್ಲಿ ಮೂರ್ತಿ ವಿಸರ್ಜನೆ ಮಾಡಬಹುದು ಎಂದು ಮುಖ್ಯಮಂತ್ರಿ ಅವರು ಮಾರ್ಗಸೂಚಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.