ಬೆಂಗಳೂರು
ವೇಗವಾಗಿ ಹೋಗುತ್ತಿದ್ದ ಖಾಸಗಿ ಬಸ್ ಡಿಕ್ಕಿ ಹೊಡೆದು ಬೈಕ್‍ನಲ್ಲಿ ತಂಗಿಯ ಮನೆಗೆ ಹೋಗುತ್ತಿದ್ದ ಖಾಸಗಿ ಕಂಪನಿಯ ಉದ್ಯೋಗಿಯೊಬ್ಬರು ಮೃತಪಟ್ಟಿರುವ ದುರ್ಘಟನೆ ಯಶವಂತಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಯಡಿಯೂರಿನ ಸಿದ್ದೇಗೌಡ(29) ಎಂದು ಮೃತಪಟ್ಟವರನ್ನು ಗುರುತಿಸಲಾಗಿದೆ,ಯಶವಂತಪುರದ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸಿದ್ದೇಗೌಡ ರಾತ್ರಿ ಪಾಳಯದಲ್ಲಿ ಕೆಲಸ ಮುಗಿಸಿಕೊಂಡು ಸೋಮವಾರ ಬೆಳಿಗ್ಗೆ 7.30ರ ವೇಳೆ ಸಣ್ಣಕ್ಕಿಬಯಲಿನ ತಂಗಿಯ ಮನೆಗೆ ಬೈಕ್‍ನಲ್ಲಿ ಹೋಗುತ್ತಿದ್ದರು.
ಮಾರ್ಗ ಮಧ್ಯೆ ಎಫ್‍ಡಿಐ ವೃತ್ತದಲ್ಲಿ ವೇಗವಾಗಿ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೋಂಡಿದ್ದು ಕೂಡೆಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ .ಯಶವಂತಪುರ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿ ಬಸ್ ಚಾಲಕನನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದು ಡಿಸಿಪಿ ಸಾರಾ ಫಾತಿಮಾ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








