ಬೆಂಗಳೂರು
ವಾಹನ ಸಂಖ್ಯೆ ಹೆಚ್ಚುತ್ತಿರುವ ಇಂದಿನ ದಿನಗಳಲ್ಲಿ ಸಾರ್ವಜನಿಕರಿಗೆ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸುವುದು ಅವಶ್ಯ ಎಂದು ಸಂಸದ ಪಿ.ಸಿ.ಮೋಹನ್ ತಿಳಿಸಿದರು.ನಗರದ ಮಹಾರಾಣಿ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ಮಹಾರಾಣಿ ಕ್ಲಸ್ಟರ್ ಯೂನಿವರ್ಸಿಟಿ ಏರ್ಪಡಿಸಿದ್ದ, ವಿಶ್ವ ನೆನಪಿನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಾಹನಗಳ ಸಂಖ್ಯೆಯು ಹೆಚ್ಚಾಗುತ್ತಿವೆ. ಕೆಲವು ವಾಹನ ಸವಾರರು ಚಾಲನೆಯ ಅರ್ಹತೆ ಪಡೆಯದೇ ವಾಹನ ಚಾಲನೆ ಮಾಡುತ್ತಿರುವ ಕಾರಣ ಹೆಚ್ಚು ಅಪಘಾತ ಸಂಭವಿಸುತ್ತಿವೆ. ಈ ಬಗ್ಗೆ ನಮಗೆ ಅರಿವು ಇರಬೇಕು ಎಂದು ಸಲಹೆ ನೀಡಿದರು.ಪ್ರತಿವರ್ಷ ಸುಮಾರು 1.3 ಭಾರತೀಯರು ರಸ್ತೆ ಅಪಘಾತದಿಂದಾಗಿ ಸಾವನ್ನಪ್ಪುತ್ತಾರೆ ಅಲ್ಲದೆ ಐದು ಲಕ್ಷಕ್ಕೂ ಹೆಚ್ಚಿನ ಜನ ತೀವ್ರತರದ ಗಾಯಗಳಿಗೆ ತುತ್ತಾಗುತ್ತಿದ್ದಾರೆ ಒಂದು ಕೋಟಿಗೂ ಹೆಚ್ಚಿನ ಜನಸಂಖ್ಯೆ ಇರುವ ಕರ್ನಾಟಕ ರಾಜ್ಯವು ಅಪಘಾತ ಪ್ರಕರಣಗಳ ಸಂಖ್ಯೆಯಲ್ಲಿ ಮೂರನೇ ಸ್ಥಾನದಲ್ಲಿದೆ ಎಂದರು.
ಎಲ್ಲಾ ಪ್ರಮುಖ ರಸ್ತೆಗಳಲ್ಲಿ ಸುರಕ್ಷತಾ ನಿಯಮಗಳ ಬಗ್ಗೆ ಮಾಹಿತಿ ನೀಡುವ ಪ್ರದರ್ಶನ ಫಲಕಗಳನ್ನು ಹಾಗೂ ಅಗತ್ಯವಿರುವ ಕಡೆಗಳಲ್ಲಿ ಸೂಚನಾ ಫಲಕ, ಅಳವಡಿಸಬೇಕು. ನಿರಂತರ ಅರಿವಿನ ಚಟುವಟಿಕೆಗಳು ನಡೆಯಬೇಕು.ಅದೇ ರೀತಿ, ರಸ್ತೆ ಸುರಕ್ಷತಾ ನಿಯಮಗಳ ಜಾಗೃತಿಯಲ್ಲಿ ಸಾರಿಗೆ ಇಲಾಖೆ, ಪೆÇಲೀಸ್ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಲೋಕೋಪಯೋಗಿ ಇಲಾಖೆ, ರಾಷ್ಟೀಯ ಹೆದ್ದಾರಿ ಇಲಾಖೆಗಳು ಹೆಚ್ಚಿನ ಜವಾಬ್ದಾರಿ ವಹಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಾಲೇಜು ವಿದ್ಯಾರ್ಥಿನಿಯರು ರಸ್ತೆ ಸುರಕ್ಷಿತಾ ಸಂಬಂಧ ಜಾಗೃತಿ ಫಲಕಗಳನ್ನು ಪ್ರದರ್ಶಿಸಿದರು. ರಸ್ತೆ ಸುರಕ್ಷತಾ ಪ್ರಾಧಿಕಾರದ ಉಪ ನಿರ್ದೇಶಕಿ ಡಾ.ಆಶಾ ಅಭಿಕರ, ಇನ್ಸ್ಟಿಟ್ಯೂಟ್ ಆಫ್ ಪಬ್ಲಿಕ್ ಹೆಲ್ತ್ ನಿರ್ದೇಶಕ ಡಾ.ಪುರೇಂದ್ರ, ಡಾ.ಎಂ.ಎಸ್.ರೆಡ್ಡಿ ಸೇರಿದಂತೆ ಪ್ರಮುಖರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








