ಲಂಚ ಸ್ವೀಕರಿಸಿದ ಸಾರಿಗೆ ಅಧಿಕಾರಿಗಳ ಅಮಾನತು…!

ಬೆಂಗಳೂರು:

     ರಾಜ್ಯದಲ್ಲಿ ಕೊರೋನಾ ಹತೋಟಿಗೆ ತರಲೆಂದು ಲಾಕ್ ಡೌನ್ ಮಾಡಿದ್ದರೆ ಬೆಂಗಳೂರು ನಗರ ಜಿಲ್ಲೆಯ ಅತ್ತಿಬೆಲೆ ಚೆಕ್ ಪೋಸ್ಟ್ ಅಲ್ಲಿ ನಿನ್ನೆ ರಾತ್ರಿ ಹಣ್ಣು ಮತ್ತು ತರಕಾರಿ ಸಾಗಣೆ ಮಾಡುತ್ತಿದ್ದ ವಾಹನ ಚಾಲಕರಿಂದ ಲಂಚ ಪಡೆದ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆಯ ಇಬ್ಬರು ಬ್ರೇಕ್ ಇನ್ಸ್ ಪೆಕ್ಟರ್ ಗಳನ್ನು ಜಿಲ್ಲಾಧಿಕಾರಿಗಳಾದ ಜಿ ಎನ್ ಶಿವಮೂರ್ತಿ ಅಮಾನತು ಮಾಡಿದ್ದಾರೆ.  

     ಬ್ರೇಕ್ ಇನ್ಸ್ ಪೆಕ್ಟರ್ ಗಳಾದ ಟಿ. ಕೆ ಜಯಣ್ಣ ಹಾಗೂ ಕರಿಯಪ್ಪ ಅಮಾನತುಗೊಂಡ ಸಾರಿಗೆ ಅಧಿಕಾರಿಗಳು ಸೇರಿದಂತೆ ಇವರೊಂದಿಗೆ ಶಾಮೀಲಾಗಿದ್ದ ಮಾಜಿ ಹೋಮ್ ಗಾರ್ಡ್ ವಿವೇಕ್ ಅವರನ್ನು ಚಾಲಕರಿಂದ ಲಂಚ ಪಡೆದ ಹಿನ್ನೆಲೆ ಅಪರ ಪೊಲೀಸ್ ಅಧೀಕ್ಷಕರಾದ ಸಜಿತ್ ಅವರಿಂದ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. 

     ಕರಿಯಪ್ಪ ಅವರಿಂದ ರೂ. 1250, ಜಯಣ್ಣ ಅವರಿಂದ ರೂ 1100 ಹಾಗೂ ವಿವೇಕ್ ಅವರಿಂದ ರೂ 800 ಹಾಗೂ ಚೆಕ್ ಪೋಸ್ಟ್ ಕಚೇರಿಯಲ್ಲಿ ರೂ.12,350 ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ