ರೋಜಗಾರ ದಿನಾಚರಣೆ

ಹಾವೇರಿ :

     ಪ್ರತಿ ಕುಟುಂಬಕ್ಕೆ ಒಂದು ಆರ್ಥಿಕ ವರ್ಷದಲ್ಲಿ ಕನಿಷ್ಠ 100 ದಿನಗಳ ಉದ್ಯೋಗವನ್ನು ಒದಗಿಸಿ ಅವರ ಜೀವನಕ್ಕೆ ಭದ್ರತೆ ಒದಗಿಸುವ ಮೂಲಕ ದೀರ್ಘಕಾಲ ಬಾಳಿಕೆ ಬರುವ ಆಸ್ತಿಗಳನ್ನು ಸೃಜಿಸುವುದು. ಗ್ರಾಮೀಣ ಬಡವರ ಜೀವನೋಪಾಯದ ಮಟ್ಟವನ್ನು ಸುಧಾರಿಸುವುದು ನರೇಗಾದ ಮುಖ್ಯ ಉದ್ದೇಶವಾಗಿದೆ ಎಂದು ತಾಪಂ ಮಾಹಿತಿ ಶಿಕ್ಷಣ ಸಂವಹನ ಅಧಿಕಾರಿಯಾದ ಗಿರೀಶ ಜಿ ಬಿ ಹೇಳಿದರು.

      ತಾಲೂಕಿನ ಕಳ್ಳಿಹಾಳ ಗ್ರಾಮ ಪಂಚಾಯತಿಯ ಕಳ್ಳಿಹಾಳ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ರೋಜಗಾರ ದಿನಾಚರಣೆ ಆಚರಿಸಿ ಅವರು ಮಾತನಾಡಿದರು. ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಲಪಡಿಸುವುದು ಗ್ರಾಮೀಣ ಪ್ರದೇಶದಲ್ಲಿ ವಾಸವಿರುವ ಅರ್ಹ ಪ್ರತಿ ಕುಟುಂಬವು ಉದ್ಯೋಗ ಚೀಟಿ ಹೊಂದುವ ಹಕ್ಕು ಹೊಂದಿರುತ್ತಾರೆ.

      ಉದ್ಯೋಗ ಚೀಟಿಯಲ್ಲಿ ಹೆಸರಿರುವ ಕುಟುಂಬದ ಎಲ್ಲಾ ವಯಸ್ಕರು, ಅಕುಶಲ ದೈಹಿಕ ಕೆಲಸಕ್ಕಾಗಿ ಅರ್ಜಿ ಸಲ್ಲಿಸಲು ಹಕ್ಕುಳ್ಳವರಾಗಿರುತ್ತಾರೆ.ಒಂದು ಆರ್ಥಿಕ ವರ್ಷದಲ್ಲಿ ಒಂದು ಕುಟುಂಬ 100 ಮಾನವ ದಿನಗಳ ಕೆಲಸಕ್ಕಾಗಿ ಅರ್ಜಿ ಸಲ್ಲಿಸಲು ಹಕ್ಕುಳ್ಳವರಾಗಿರುತ್ತಾರೆ. ಮಹಿಳೆಯರಿಗೆ ಮತ್ತು ಪುರುಷರಿಗೆ ಸಮಾನ ಕೂಲಿ . ಕೆಲಸಕ್ಕೆ ಬೇಡಿಕೆ ಸಲ್ಲಿಸಿದ ಹದಿನೈದು ದಿನದೊಳಗೆ ಉದ್ಯೋಗ ನೀಡದಿದ್ದಲ್ಲಿ ನಿರುದ್ಯೋಗ ಭತ್ಯೆಗೆ ಅವಕಾಶವಿರುತ್ತದೆ. ವಾರಾಂತ್ಯದಲ್ಲಿ ಕೂಲಿಯನ್ನು ಪಾವತಿಸಬೇಕು.

      ಅನಿವಾರ್ಯ ಸಂಧರ್ಭದಲ್ಲಿ ಗರಿಷ್ಟ 15 ದಿನಗಳಿಗೆ ಮೀರದಂತೆ ಕೂಲಿ ಪಾವತಿಸುವುದು ಕಡ್ಡಾಯ. ತಪ್ಪಿದ್ದಲ್ಲಿ ಕೂಲಿ ವಿಳಂಬ ಪರಿಹಾರ ಭತ್ಯೆ ಪಡೆಯಲು ಅವಕಾಶವಿರುತ್ತದೆ. ಕೂಲಿ ಹಣ ನೇರವಾಗಿ ಇ.ಎಫ್.ಎಂ.ಎಸ್. ಮೂಲಕ ನಿಮ್ಮ ಖಾತೆಗೆ ಜಮಾ ಮಾಡಲಾಗುವುದು. ವೈಯಕ್ತಿಕ ಅಥವಾ ಸಮುದಾಯ ಕಾಮಗಾರಿಗಳನ್ನು ಹೊರತುಪಡಿಸಿ ಅವಶ್ಯಕತೆ ಇದ್ದಲ್ಲಿ ಸರ್ಕಾರದ ಅನುಮೋದಿತ ಕಾಮಗಾರಿಗಳ ಪಟ್ಟಿಯಲ್ಲಿ (260) ಇರತಕ್ಕ ಕಾಮಗಾರಿಗಳನ್ನು ಕೈಗೊಳ್ಳುಬಹುದಾಗಿದೆ ಎಂದು ಸಂವಹನ ಅಧಿಕಾರಿಯಾದ ಗಿರೀಶ ಜಿ ಬಿ ತಿಳಿಸಿದರು.

      ಈ ಸಂದರ್ಭದಲ್ಲಿ ಉದ್ಯೋಗ ಚೀಟಿ ಪಡೆದ ಕೂಲಿ ಕಾರ್ಮಿಕರು, ಗ್ರಾಮ ಪಂಚಾಯತಿಯ ಅಭಿವೃಧ್ಧಿ ಅಧಿಕಾರಿ ಶ್ರಿಮತಿ ಶೋಭಾ ನಾಯಕ್ ಗ್ರಾಪಂ ಕಾರ್ಯವೃಂದದವರು ಪಾಲ್ಗೊಂಡಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link