ದಾವಣಗೆರೆ:
ನಗರದ ರೌಡಿ ಶೀಟರ್ ಬುಳ್ ನಾಗ ಅಲಿಯಾಸ್ ನಾಗರಾಜನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಳೆದ ತಡರಾತ್ರಿ ನಡೆದಿದೆ.
ನಗರದ ಹೈಟೆಕ್ ಆಸ್ಪತ್ರೆಯ ಹಿಂಭಾಗದಲ್ಲಿರುವ ಕೆಎಸ್ಆರ್ಟಿಸಿ ಡಿಪೋ ಬಳಿಯಲ್ಲಿ ಬುಳ್ ನಾಗನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಿರುವ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಕೊಲೆಗೂ ಮುನ್ನ ಗುಂಪು ಘರ್ಷಣೆ ನಡೆದಿದೆ ಎನ್ನಲಾಗಿದ್ದು, ಹಳೇ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.ಈ ಕುರಿತು ದಾವಣಗೆರೆ ವಿದ್ಯಾ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.