ಬೆಂಗಳೂರು
ಖಾಸಗಿ ಶಾಲೆಯೊಂದರಲ್ಲಿ ಮಗುವಿಗೆ ಆರ್ಟಿಐ ಅಡಿಯಲ್ಲಿ ಸೀಟು ಕೊಡಿಸುವುದಾಗಿ ನಂಬಿಸಿ ಮಹಿಳೆಗೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಕನ್ನಡ ಸಿರಿ ಸಂಘಟನೆ ಅಧ್ಯಕ್ಷ ಕನ್ನಡ ಸಂಘಟನೆಯ ಅಧ್ಯಕ್ಷ ಆನಂದ್ನನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.
ಬಂಧಿತ ಆರೋಪಿ ಹಾರೋಹಳ್ಳಿಯ ಆನಂದ್ ಮಹಿಳೆಯೊಬ್ಬರಿಗೆ ನಿಮ್ಮ ಮಗುವಿಗೆ ಆರ್ಟಿಐ ಅಡಿಯಲ್ಲಿ ಸೀಟು ಕೊಡಿಸುವುದಾಗಿ ನಂಬಿಸಿದ್ದು ಈ ಬಗ್ಗೆ ಮಾತನಾಡಲು ಬರುವಂತೆ ತನ್ನ ಮನೆಗೆ ಕರೆಸಿಕೊಂಡು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.
ಲೈಂಗಿಕ ದೌರ್ಜನ್ಯವನ್ನು ಮೊಬೈಲ್ನಲ್ಲಿ ರೆಕಾರ್ಡ್ ಮಾಡಿಕೊಂಡು ನನ್ನ ಜೊತೆ ಸಹಕರಿಸದಿದ್ದರೆ ವಿಡಿಯೋವನ್ನ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿ ಮಾಡಿ ವೈರಲ್ ಮಾಡುವುದಾಗಿ ಪೊಲೀಸರಿಗೆ ದೂರು ನೀಡಿದರೆ ಕೊಲೆ ಮಾಡುವುದಾಗಿಯೂ ಬೆದರಿಕೆ ಹಾಕಿದ್ದಾನೆ.
ಸಂತ್ರಸ್ಥ ಮಹಿಳೆ ಬ್ಯಾಡರಹಳ್ಳಿ ಪೊಲೀಸ್ ಠಾಣೆಗೆ ಬಂದು ಆರೋಪಿ ವಿರುದ್ಧ ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಆನಂದ್ನನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








