ಎಂ ಎನ್ ಕೋಟೆ
ಗುಬ್ಬಿ ತಾಲ್ಲೂಕಿನ ಎಂ ಎನ್ ಕೋಟೆ ಗ್ರಾಮದ ಶ್ರೀ ರುದ್ರಮಲ್ಲೇಶ್ವರಸ್ವಾಮಿ ಹಾಗೂ ಮಲ್ಲಿಕಾರ್ಜುನಸ್ವಾಮಿ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನಡೆಯಿತ್ತು. ಬೆಳಿಗ್ಗೆ ಧ್ವಜಾರೋಹಣ ಹಾಗೂ ವಿವಿಧ ಪೂಜಾ ಕಾರ್ಯಕ್ರಮಗಳು ನಡೆದವು. ಬೆಳಿಗ್ಗೆ ದೇವಾಲಯದಲ್ಲಿ ಸ್ವಾಮಿಗೆ ಅಭಿಷೇಕ, ಸಹಸ್ರ ಬಿಲ್ವಾರ್ಚನೆ ಪೂಜಾ ಕಾರ್ಯಕ್ರಮಗಳು ನಡೆದವು.
ಮಧ್ಯಾಹ್ನ 1ಗಂಟೆಗೆ ಭಕ್ತಾಧಿಗಳಿಗೆ ಮಹಾ ದಾಸೋಹ ಏರ್ಪಡಿಸಲಾಗಿತ್ತು. ಜಿಲ್ಲೆಯ ಸಾವಿರಾರು ಭಕ್ತರು ರುದ್ರಮಲ್ಲೇಶ್ವರ ಸ್ವಾಮಿಯ ದೇವಾಲಯಕ್ಕೆ ತೆರಳಿ ಸ್ವಾಮಿಯ ದರ್ಶನ ಪಡೆದರು. ತೇವಡೆಹಳ್ಳಿ ಮಠದ ಶ್ರೀ ಚನ್ನ ಬಸವೇಶ್ವರ ಶಿವಚಾರ್ಯ ಸ್ವಾಮಿಗಳು ಭೇಟಿ ನೀಡಿ ಸ್ವಾಮಿಯ ದರ್ಶನವನ್ನು ಪಡೆದರು.
ಸಂಜೆ ಶ್ರೀ ಆಧಿಶಕ್ತಿ ಮಕ್ಕಳ ತಾಯಿ ಕೋಟೆ ಕೋಲ್ಲಾಪುರದಮ್ ದೇವಿ , ಹಾಗೂ ರುದ್ರಮಲ್ಲೇಶ್ವರ ಸ್ವಾಮಿ ಹಾಗೂ ಲಿಂಗದ ವೀರರ ಕುಣಿತ , ಭದ್ರಕಾಳಿ ಕುಣಿತ ಹಾಗೂ ಚಿಟ್ಟಿಮೇಳ ಬಾಣ ಬಿರುಸುಗಳೊಂದಿಗೆ ಊರಿನ ರಾಜಬೀದಿಯಲ್ಲಿ ಉತ್ಸವ ನಡೆಯಲಿದೆ. ಸಾವಿರಾರು ಭಕ್ತರು ಸ್ವಾಮಿಯ ದರ್ಶನ ಪಡೆದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
