ಬೆಂಗಳೂರು
ಆರ್‍ಎಸ್‍ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿಗಳ ಮರು ವಿಚಾರಣೆ ವಿರೋಧಿಸಿ ಸಲ್ಲಿಸಿದ ಅರ್ಜಿಯನ್ನ ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದೆ.
ಅಧೀನ ನ್ಯಾಯಲಯದ ಪ್ರಕಾರ ಆರೋಪಿಗಳು ಸಲ್ಲಿಕೆ ಮಾಡಿರುವ ಅರ್ಜಿಯಲ್ಲಿ ಹೇಳುವಷ್ಟು ಗಂಭೀರ ಸ್ವರೂಪ ಹೊಂದಿಲ್ಲ ಎಂಬ ಆಧಾರದಲ್ಲಿ ಸಾಕ್ಷಿಗಳ ಮರು ವಿಚಾರಣೆ ತಪ್ಪು ಎಂಬ ಅಭಿಪ್ರಾಯವನ್ನು ನ್ಯಾಯಮೂರ್ತಿ ಪಿ.ಎಸ್ ದಿನೇಶ್‍ಕುಮಾರ್ ಅವರಿದ್ದ ನ್ಯಾಯಪೀಠ ವ್ಯಕ್ತಪಡಿಸಿ ಅರ್ಜಿ ವಜಾಗೊಳಿಸಿದೆ.
ಏನಿದು ಅರ್ಜಿ
ಶಿವಾಜಿ ನಗರದ ಕಾಮರಾಜ ರಸ್ತೆಯಲ್ಲಿನ ಮೆಡಿಕಲ್ ಸ್ಟೋರ್ ಎದುರು ತನ್ನ ಸ್ನೇಹಿತನ ಜೊತೆ ನಿಂತಿದ್ದ ಆರ್‍ಎಸ್‍ಎಸ್ ಕಾರ್ಯಕರ್ತ ರುದ್ರೇಶ್‍ರನ್ನು ಬೈಕ್‍ನಲ್ಲಿ ಬಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು.ಈ ಪ್ರಕರಣದಲ್ಲಿ ಅಸೀಮ್ ಷರೀಫ್, ಇರ್ಫಾನ್ ಪಾಷಾ, ವಸೀಂ ಅಹಮದ್, ಮಹಮ್ಮದ್ ಸಾದಿಕ್ ಅಲಿಯಾಸ್ ಮಹಜರ್ ಮತ್ತು ಮಹಮ್ಮದ್ ಮುಜೀಬುಲ್ಲಾ ಅಲಿಯಾಸ್ ಮೌಲ ಆರೋಪಿಗಳನ್ನ ಬಂಧಿಸಲಾಗಿತ್ತು.