ಜಾಫರ್ ಷರೀಫ್ ನಿಧನಕ್ಕೆ ಸಂತಾಪ ಸೂಚಿಸಿದ ಕುಮಾರಸ್ವಾಮಿ

ಬೆಂಗಳೂರು

        ಕೇಂದ್ರದ ಮಾಜಿ ಸಚಿವ ಸಿ.ಕೆ.ಜಾಫರ್ ಷರೀಫ್ ಅವರ ನಿಧನಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ನಮ್ಮ ಕುಟುಂಬದೊಂದಿಗೆ ಷರೀಫ್ ಅವರು ಆತ್ಮೀಯ ಸಂಬಂಧ ಹೊಂದಿದ್ದರು. ಕೇಂದ್ರ ಸಚಿವರಾಗಿ ಅವರು ರಾಜ್ಯಕ್ಕೆ, ದೇಶಕ್ಕೆ ಅತ್ಯುತ್ತಮ ಕೊಡುಗೆ ನೀಡಿದ್ದರು ಎಂದು ಹೇಳಿದ್ದಾರೆ.

        ರೈಲ್ವೆ ಸಚಿವರಾಗಿ ನಮ್ಮ ರಾಜ್ಯಕ್ಕೆ ಅವರು ನೀಡಿದ ಕೊಡುಗೆ ಅತ್ಯಂತ ಶ್ಲಾಘನೀಯ. ರಾಜ್ಯಕ್ಕೆ ಅತಿ ಹೆಚ್ಚು ಕೊಡುಗೆ ನೀಡಿದವರಲ್ಲಿ ಷರೀಫ್ ಅವರು ಅಗ್ರಗಣ್ಯರು. ರಾಷ್ಟ್ರಾದ್ಯಂತ ಮೀಟರ್ಗೇಜ್ ಹಳಿಗಳನ್ನು ಬ್ರಾಡ್‍ಗೇಜ್‍ಗೆ ಪರಿವರ್ತಿಸಿದ ಶ್ರೇಯಸ್ಸು ಅವರಿಗೆ ಸಲ್ಲುತ್ತದೆ ಎಂದು ಕುಮಾರಸ್ವಾಮಿ ಸ್ಮರಿಸಿದರು.

         ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಅವರ ಕುಟುಂಬ ವರ್ಗ ಹಾಗೂ ಅಭಿಮಾನಿಗಳಿಗೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸಿದರು. ದೇಶಪಾಂಡೆ ಸಂತಾಪ: ಸಿ.ಕೆ.ಜಾಫರ್ ಷರೀಫ್ ಅವರ ನಿಧನದ ಸುದ್ದಿ ಕೇಳಿ ನನಗೆ ಶಾಕ್ ಆದಂತಾಗಿದೆ. ಇದು ಅತ್ಯಂತ ದುಃಖದ ಸಮಾಚಾರ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ದುಃಖ ವ್ಯಕ್ತಪಡಿಸಿದ್ದಾರೆ.

       ರೈಲ್ವೆ ಸಚಿವರಾಗಿ ಆ ಇಲಾಖೆಯಲ್ಲಿ ಅವರು ತಂದ ಸುಧಾರಣೆ ಮತ್ತು ಕರ್ನಾಟಕಕ್ಕೆ ನೀಡಿದ ಕೊಡುಗೆ ಕ್ರಾಂತಿಕಾರಕವಾದುದು ಎಂದು ಹೇಳಿದ್ದಾರೆ. ಶರೀಫ್ ಅವರನ್ನು ಕಳೆದುಕೊಂಡ ನಾಡು ಬರಡಾಗಿದೆ. ಅವರ ನಿಧನದಿಂದ ಉಂಟಾಗಿರುವ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ದಯಾಮಯನು ಅವರ ಕುಟುಂಬ ವರ್ಗಕ್ಕೆ ಸಮಸ್ತರಿಗೆ ನೀಡಲೆಂದು ಪ್ರಾರ್ಥಿಸುತ್ತೇನೆ ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link
Powered by Social Snap