ಹೆಬ್ಬೂರು
ತುಮಕೂರು ತಾಲ್ಲೂಕು ಹೆಬ್ಬೂರು ಗ್ರಾಮದಲ್ಲಿ ಮಂಗಳವಾರ ಸಲೂನ್ ಅಂಗಡಿ ಮಾಲೀಕನಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಅವರಿದ್ದ ಮನೆಯ ಸುತ್ತಮುತ್ತ ಸೀಲ್ ಡೌನ್ ಮಾಡಿ ಕಂಟೈನ್ಮೆಂಟ್ ಪ್ರದೇಶವನ್ನಾಗಿ ಘೋಷಿಸಲಾಯಿತು. ಪ್ರಾಥಮಿಕ ಸಂಪರ್ಕದಲ್ಲಿದ್ದ 8 ಮಂದಿ ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದ ಇಬ್ಬರನ್ನು ಕ್ವಾರಂಟೈನ್ ಮಾಡಲಾಗಿದೆ.
ಸೋಮವಾರವಷ್ಟೆ ಹೊರಗಡೆಯಿಂದ ಬಂದಿದ್ದ ನಾಲ್ಕು ಮಂದಿಗೆ ಪಾಸಿಟಿವ್ ಬಂದಿದ್ದು, ಇದೀಗ ಮತ್ತೆ ಕೊರೊನ ಸಂಖ್ಯೆ ಹೆಚ್ಚಳವಾಗಿದೆ. ಒಂದು ವಾರದಿಂದ 8 ಹೊಸ ಪ್ರಕರಣಗಳು ದಾಖಲಾಗಿವೆ. ಗ್ರಾಮದಲ್ಲಿನ ಒಟ್ಟು 14 ಸೋಂಕು ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 6 ಸಕ್ರಿಯ ಪ್ರಕರಣಗಳಿದ್ದು, 7 ಮಂದಿ ಗುಣಮುಖರಾಗಿ, 1 ಸಾವಾಗಿದೆ.
ಈ ಸಂದರ್ಭದಲ್ಲಿ ಗ್ರಾ.ಪಂ. ಪಿಡಿಓ ಜ್ಯೋತಿ, ಲೆಕ್ಕಾಧಿಕಾರಿ ಮಹದೇವಯ್ಯ, ಆರೋಗ್ಯ ಇಲಾಖೆಯ ವೈದ್ಯಾಧಿಕಾರಿ ಡಾ. ಲಕ್ಮೀ, ಹಿರಿಯ ಆರೋಗ್ಯ ಸಹಾಯಕ ಜವರಯ್ಯ, ಕಿರಿಯ ಸಹಾಯಕಿ ಅಂಜಲಾದೇವಿ, ಪೊಲೀಸ್ ಇಲಾಖೆಯ ಕೀರ್ತಿಪ್ರಸಾದ್ ಎಮ್.ಎಚ್, ಆಶಾ ಕಾರ್ಯಕರ್ತೆ ಹಾಗೂ ಗ್ರಾಮ ಪಂಚಾಯ್ತಿ ಸಿಬ್ಬಂದಿ ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ