ಸೆ.18ರವರೆಗೆ ಸಂಜನಾ ನ್ಯಾಯಾಂಗ ಬಂಧನ ..!

ಬೆಂಗಳೂರು:

    ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ನಟಿ ಸಂಜನಾ ಗಲ್ರಾನಿ ಮತ್ತಿತರರಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.ಪ್ರಕರಣದಲ್ಲಿ ನಟಿ ಸಂಜನಾಗೆ ಎರಡು ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ, ಇದರಂತೆ ಸೆಪ್ಟೆಂಬರ್ 18ರವರೆಗೆ  ಸಂಜನಾ ನ್ಯಾಯಾಂಗ ಬಂಧನದಲ್ಲಿರಬೇಕಿದೆ,

   ಸಿಸಿಬಿ ಕಸ್ಟಡಿ ಅಂತ್ಯವಾಗಿದ್ದ ಹಿನ್ನೆಲೆ ಬುಧವಾರ ನಟಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಪ್ರಕರಣದಲ್ಲಿ 14ನೇ ಆರೋಪಿಯಾಗಿರುವ ನಟಿ ಸಂಜನಾ ವಿಡಿಯೋ ಕಾನ್ಫರೆನ್ಸ್‌ ಮೂಲಕ ಕೋರ್ಟ್ ಗೆ ಹಾಜರಾಗಿದ್ದರು. ಈ ವೇಳೆ ವಿಚಾರಣೆ ನಡೆಸಿದ 1 ನೇ ಎಸಿಎಂಎಂ ಕೋರ್ಟ್ ಸಂಜನಾಗೆ 2 ದಿನ ಹಾಗೂ  ವೀರೇನ್ ಖನ್ನಾ, ರವಿಶಂಕರ್ ಅವರುಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap