ಹಾವೇರಿ
ಸರಕು ಸಾಗಾಣಿಕೆ ಮಾಡುವ ವಾಹನಗಳಲ್ಲಿ ಪ್ರಯಾಣಿಸಿದಂತೆ ಸಾರ್ವಜನಿಕರಲ್ಲಿ ಹಾವೇರಿ ಶಹರ ಪೊಲೀಸ್ ಠಾಣೆಯ ಪಿ.ಎಸ್.ಐ ಯು.ಕೆ.ಕುಲಕಕರ್ಣಿ ಅವರು ಮನವಿ ಮಾಡಿಕೊಂಡಿದ್ದಾರೆ.
ತಾಲೂಕಿನ ಯತ್ತಿನಹಳ್ಳಿ ಗ್ರಾಮದಲ್ಲಿ ಹಾವೇರಿ ಶಹರ ಪೊಲೀಸ್ ಠಾಣಾ ವತಿಯಿಂದ ಶನಿವಾರ ಆಯೋಜಿಸಲಾದ ಸಂಚಾರಿ ನಿಯಮ ಹಾಗೂ ಸರಕು ವಾಹನಗಳಲ್ಲಿ ಸಂಚರಿಸದಂತೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.ಠಾಣೆಯ ಎ.ಎಸ್.ಐ ಎಸ್.ಡಿ.ಸಾಲಗುಂದಿ ಅವರು ಮಾತನಾಡಿ, ಸಾರ್ವಜನಿಕರ ಹಿತದೃಷ್ಟಿಯಿಂದ ಸರಕು ವಾಹನಗಳಲ್ಲಿ ಪ್ರಯಾಣಿಸಬಾರದು. ಓಮಿನಿ, ಕಾರು, ಅಟೋ ರಿಕ್ಷಾಗಳಲ್ಲಿ ಮಿತಿಗಿಂತ ಹೆಚ್ಚಿನ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗಬಾರದು ಹಾಗೂ ರಸ್ತೆ ಸಂಚಾರಿ ನಿಯಮಗಳನ್ನು ಪಾಲಿಸಬೇಕು ಎಂದು ಮನವಿ ಮಾಡಿಕೊಂಡಿದರು.ಕಾರ್ಯಕ್ರಮದಲ್ಲಿ ಬೀಟ್ ಸಿಪಿಸಿ-813 ಮಾರುತಿ ಬಿ.ಹಿತ್ಲರ, ಗ್ರಾಮಸ್ಥರು, ಶಿಕ್ಷಕರು ಹಾಗೂ ಮಕ್ಕಳು ಇತರರು ಉಪಸ್ಥಿತರಿದ್ದರು.