ಚಳ್ಳಕೆರೆ
ರಾಷ್ಟ್ರ ವiತ್ತು ರಾಜ್ಯದಲ್ಲಿ ಪತ್ರಿಕಾ ಕ್ಷೇತ್ರದ ಕಾರ್ಯಚಟುವಟಿಕೆಗಳಿಗೆ ಉತ್ತಮ ವಾತಾವರಣವಿದ್ದು, ಪತ್ರಿಕೆಗಳು ಇಂದು ಸಮಾಜಮುಖಿಯಾಗಿ ಕಾರ್ಯನಿರ್ವಹಿಸುತ್ತಿರುವುದು ಸಂತಸ ವಿಷಯವೆಂದು ಇಲ್ಲಿನ ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಬಸವರಾಜು ತಿಳಿಸಿದರು.
ಅವರು, ಶನಿವಾರ ತಾಲ್ಲೂಕು ಪತ್ರಿಕಾ ಸಂಪಾದಕರ ವೇದಿಕೆಯಿಂದ ಆಸ್ಪತ್ರೆಯ ಎಲ್ಲಾ ರೋಗಿಗಳಿಗೆ ಪತ್ರಿಕಾ ದಿನಾಚರಣೆ ಅಂಗವಾಗಿ ಹಣ್ಣು, ಬ್ರೆಡ್ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರಲ್ಲದೆ, ಪ್ರತಿ ವಾರ್ಡ್‍ಗೂ ತೆರಳಿ ರೋಗಿಗಳಿಗೆ ಹಣ್ಣು ಬ್ರೆಡ್ ವಿತರಿಸುವ ಕಾರ್ಯದಲ್ಲಿ ನೆರವಾದರು.
ಅಧ್ಯಕ್ಷ ರಂಗಸ್ವಾಮಿ ಮಾತನಾಡಿ, ಪ್ರತಿವರ್ಷದಂತೆ ಈ ವರ್ಷವೂ ಸಹ ಪತ್ರಿಕಾ ದಿನಾಚರಣೆ ಅಂಗವಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆಸ್ಪತ್ರೆಯ ರೋಗಿಗಳಿಗೆ ಹಣ್ಣು, ಬ್ರೆಡ್ ನೀಡುವ ಮೂಲಕ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಗಿದೆ. ನಮ್ಮ ಈ ಕಾರ್ಯಕ್ರಮಕ್ಕೆ ಹಲವಾರು ರೀತಿಯ ಸಹಕಾರ ನೀಡಿದ ಎಲ್ಲರಿಗೂ ಅಭಿನಂದನೆಯನ್ನು ತಿಳಿಸುವುದಾಗಿ ತಿಳಿಸಿದರು.
ಉಪಾಧ್ಯಕ್ಷ ಆರ್.ಸತೀಶ್‍ಕುಮಾರ್, ಕಾರ್ಯದರ್ಶಿ ಎನ್.ತಿಪ್ಫೇರುದ್ರಪ್ಪ, ವಿ.ಚನ್ನಕೇಶವಮೂರ್ತಿ, ಪಿ.ಗಂಗಾಧರ, ಆರ್.ವಿಜಯಸೇನ, ಡಿ.ತಿಪ್ಪೇಸ್ವಾಮಿ, ಕೆ.ಟಿ.ರಾಜಣ್ಣ, ಮುಖಂಡ ಆರ್.ಪ್ರಸನ್ನಕುಮಾರ್ ಮುಂತಾದವರು ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
