ಸರಳವಾಗಿ ಶ್ರೀ ದೇವರ ದಾಸಿಮಯ್ಯ ಜಯಂತಿ ಆಚರಣೆ

ಬಳ್ಳಾರಿ

       ಜಿಲ್ಲಾಡಳಿತ ವತಿಯಿಂದ ಶ್ರೀ ದೇವರ ದಾಸಿಮಯ್ಯ ಅವರ ಜಯಂತಿಯನ್ನು ನಗರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರರಂದು ಸರಳವಾಗಿ ಆಚರಣೆ ಮಾಡಲಾಯಿತು.

       ಲೋಕಸಭಾ ಚುನಾವಣಾ-2019ರ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸಾಂಕೇತಿಕವಾಗಿ ಜಯಂತಿಯನ್ನು ಆಚರಿಸಲಾಯಿತು . ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ಶ್ರೀ ದೇವರ ದಾಸಿಮಯ್ಯ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

       ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್, ಸಹಾಯಕ ಆಯಕ್ತ ರಮೇಶ್.ಪಿ ಕೋನರೆಡ್ಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೆ.ನಾಗರಾಜ್, ದೇವರ ದಾಸಿಮಯ್ಯ ಸಂಘದ ಜಿಲ್ಲಾಧ್ಯಕ್ಷ ದೇವಾನಂದ ಸೇರಿದಂತೆ ಸಮಾಜದ ಮುಖಂಡರು ಹಾಗೂ ಇತರೆ ಗಣ್ಯವ್ಯಕ್ತಿಗಳು ಇದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link