ಬೆಂಗಳೂರು:
ಸೀರೆ ಅಂಗಡಿಯ ಹಿಂದಿನ ಗೋಡೆ ಕನ್ನ ಕೊರೆದು 10 ಲಕ್ಷ ಮೌಲ್ಯದ ಸೀರೆಗಳನ್ನು ದುಷ್ಕರ್ಮಿಗಳು ಕಳವು ಮಾಡಿ ಪರಾರಿಯಾಗಿರುವ ದುರ್ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ನಗರದ ಸೌಮ್ಯ ಸಿಲ್ಕ್ಸ್ ಅಂಡ್ ಸ್ಯಾರೀಸ್ ಮಾಲೀಕ ವೆಂಕಟೇಶಯ್ಯ ಶೆಟ್ಟಿ ಎಂಬುವರ ಅಂಗಡಿಗೆ ಹಿಂದಿನ ಭಾಗಿಲ ಗೋಡೆಯ ಕನ್ನಕೊರೆದು ಒಳನುಗ್ಗಿರುವ ದುಷ್ಕರ್ಮಿಗಳು 10 ಲಕ್ಷ ಮೌಲ್ಯದ ರೇಷ್ಮೆ ಸೀರೆ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ.ರಾತ್ರಿ ಅಂಗಡಿ ಬಾಗಿಲು ಹಾಕೊಕೊಂಡು ಹೋಗಿದ್ದ ಅಂಗಡಿ ಮಾಲೀಕರು ಬೆಳಿಗೆ ಬಂದು ಬಾಗಿಲು ತೆಗೆದು ನೋಡಿದಾಗ ಕಳ್ಳತನವಾಗಿರುವುದು ಕಂಡುಬಂದಿದೆ. ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಕಳ್ಳರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
