ಸರ್ಕಾರ ಉಳಿಸಿಕೊಳ್ಳಲು ಮುಖ್ಯಮಂತ್ರಿಗಳಿಂದ ಹೋಸ ಕಾರ್ಯತಂತ್ರ..!!!

ಬೆಂಗಳೂರು

    ಸಮ್ಮಿಶ್ರ ಸರ್ಕಾರವನ್ನು ಉಳಿಸಿಕೊಳ್ಳಲು ಭಗೀರಥ ಪ್ರಯತ್ನ ನಡೆಸಿದ್ದರೂ ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನವನ್ನು ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟುಕೊಡುವ ಮೂಲಕ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಡೆಗಳಿಗೆಯ ಕಸರತ್ತು ನಡೆಸುವ ಮೂಲಕ ಹೊಸ ತಂತ್ರಗಾರಿಕೆಗೆ ಮುಂದಾಗಿದ್ದಾರೆ.

    ನಾಳೆ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಕಲಾಪ ನಡೆಯುವ ಬಗ್ಗೆ ಸಾಕಷ್ಟು ಅನುಮಾನಗಳು ವ್ಯಕ್ತವಾಗುತ್ತಿವೆ. ಈ ವಿದ್ಯಮಾನಗಳ ಬೆನ್ನಲ್ಲೇ ಮುಖ್ಯಮಂತ್ರಿಗಳು ಕಾಂಗ್ರೆಸ್ ಪಕ್ಷಕ್ಕೆ ಸಿಎಂ ಸ್ಥಾನ ಬಿಟ್ಟುಕೊಡುವುದಾಗಿ ಹೇಳಿರುವುದು ರಾಜ್ಯ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

    ಸಮ್ಮಿಶ್ರ ಸರ್ಕಾರದಲ್ಲಿ 17 ಮಂದಿ ಶಾಸಕರು ವಿಧಾನಸಭೆ ಕಲಾಪಕ್ಕೆ ಗೈರು ಹಾಜರಾಗಿದ್ದಾರೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಬಹುಮತ ಸಾಬೀತುಪಡಿಸುವುದು ಅಸಾಧ್ಯ ಎಂಬ ಅಂಶ ಮುಖ್ಯಮಂತ್ರಿಗಳಿಗೆ ಮನವರಿಕೆಯಾಗಿದೆ. ಹೀಗಾಗಿ ಕೊನೆಯ ಅಸ್ತ್ರವಾಗಿ ಕೈ ನಾಯಕರಿಗೆ ಸಿಎಂ ಹುದ್ದೆ ನೀಡುವುದಾಗಿ ಹೇಳಿದ್ದಾರೆಂದು ಮೂಲಗಳು ತಿಳಿಸಿವೆ.

   ವಿದಾನಸಭಾ ಚುನಾವಣಾ ಫಲಿತಾಂಶ ಹೊರಬಿದ್ದ ನಂತರ 20-20 ಸರ್ಕಾರವಲ್ಲ ಐದು ವರ್ಷಗಳವರೆಗೆ ಹೆಚ್.ಡಿ.ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿ ಆಗಿ ಮುಂದುವರೆಯುತ್ತಾರೆ ಎಂದು ಕಾಂಗ್ರೆಸ್ ನಾಯಕರು ಈ ಹಿಂದೆ ಹೇಳಿಕೆ ನೀಡಿದ್ದರೂ ಆದರೆ ಕಾಂಗ್ರೆಸ್ ಪಕ್ಷದಲ್ಲಿ ಅತೃಪ್ತ ಶಾಸಕರ ಸಂಖ್ಯೆ ಹೆಚ್ಚಾಗಿ ಶಾಸಕರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

   ಇದರಿಂದಾಗಿ ಕಾಂಗ್ರೆಸ್ ಪಕ್ಷಕ್ಕೆ ಸಿಎಂ ಹುದ್ದೆ ಬಿಟ್ಟುಕೊಡಲು ಕುಮಾರಸ್ವಾಮಿ ಮುಂದಾಗಿದ್ದಾರೆ ಎಂದು ಹೇಳಲಾಗಿದೆ. ಸರ್ಕಾರ ಉಳಿಸಿಕೊಡುವ ಸಂಬಂಧ ನಡೆಸಿದ ಎಲ್ಲಾ ಕಸರತ್ತುಗಳು ನಡೆಸಿ ಕೈಚೆಲ್ಲಿ ಆಗಿದೆ. ಸರ್ಕಾರ ಉಳಿಸಿಕೊಳ್ಳುವುದು ಅಸಾಧ್ಯದ ಮಾತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕೈ ಶಾಸಕರ ಮನವೊಲಿಸಿ ಅವರನ್ನು ವಾಪಸ್ಸು ಕರೆದುಕೊಂಡು ಬಂದು ಮುಖ್ಯಮಂತ್ರಿಯಾಗಿ ಸರ್ಕಾರವನ್ನು ಉಳಿಸಿಕೊಳ್ಳುವಂತೆ ಮೈತ್ರಿ ನಾಯಕರಿಗೆ ಸಿಎಂ ಹೇಳಿದ್ದಾರೆಂದು ಮೂಲಗಳು ತಿಳಿಸಿವೆ.

      ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap