ಬಳ್ಳಾರಿ
ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರು ಈಶಾನ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಹೊಸಪೇಟೆ ಬಸ್ ನಿಲ್ದಾಣಕ್ಕೆ ಶುಕ್ರವಾರ ಬೆಳಗ್ಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಇಡೀ ಬಸ್ ನಿಲ್ದಾಣದಲ್ಲಿ ಕೈಗೊಳ್ಳಲಾಗಿರುವ ಕ್ರಮಗಳನ್ನು ಪರಿಶೀಲಿಸಿದರು ಮತ್ತು ಪ್ರಯಾಣಿಕರೊಂದಿಗೆ ಸಂವಾದ ಮಾಡಿದರು. ಪ್ರಯಾಣಿಕರ ಆರೋಗ್ಯದ ಹಿತದೃಷ್ಟಿಯಿಂದ ಸ್ಯಾನಿಟೈಜರ್ ಮಾಸ್ಕ್, ಕಡ್ಡಾಯವಾಗಿ ಬಳಕೆ ಮಾಡುವಂತೆ ತಿಳಿಸಿದರು. ಸಾಮಾಜಿಕ ಅಂತರ ಪಾಲನೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಹೊಸಪೇಟೆ ಬಸ್ ನಿಲ್ದಾಣದಲ್ಲಿ ಕೈಗೊಳ್ಳಲಾದ ಸಿದ್ಧತೆಗಳನ್ನು ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಆಟೋ ಚಾಲಕರಿಗೆ ಮುಂದಿನ ದಿನಗಳಲ್ಲಿ ಸಹಾಯಧನ ವಿತರಿಸುವ ಯೋಜನೆ ಹಮ್ಮಿಕೊಂಡಿದ್ದು, ಅದೇ ರೀತಿಯಾಗಿ ನಿಯಮಗಳನ್ನು ಅನುಸರಿಸಿಕೊಂಡು ರಾತ್ರಿ ಸಾರಿಗೆ ಸಂಚಾರದ ವ್ಯವಸ್ಥೆಗೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಕೆಲವೇ ದಿನಗಳಲ್ಲಿ ರಾತ್ರಿ ಪ್ರಯಾಣಕ್ಕೂ ಅವಕಾಶ ಕಲ್ಪಿಸಲಾಗುತ್ತದೆ ಎಂದು ಅವರು ತಿಳಿಸಿದರು.ಎನ್‍ಇಕೆಎಸ್‍ಆರ್‍ಟಿಸಿ ವಿಭಾಗೀಯ ಅಧಿಕಾರಿ ಸೀನಯ್ಯ ಹಾಗೂ ಇನ್ನೀತರ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ