ಶ್ರೀ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮ

ಹಾವೇರಿ 

        ಸಮಾಜದ ಶ್ರೇಷ್ಠತೆಗೆ ಶ್ರಮಿಸಿದ ಯುಗಪುರುಷ ಎಂದು ಖ್ಯಾತರಾದ ಶ್ರೀ ಸವಿತಾ ಮಹರ್ಷಿಗಳ ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು ಎಂದು ನಗರಸಭೆ ಸದಸ್ಯ ಸಂಜೀವಕುಮಾರ ನೀರಲಗಿ ಅವರು ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕತಿ ಇಲಾಖೆ ಸಹಯೋಗದಲ್ಲಿ ಮಂಗಳವಾರ ನಗರದ ಶ್ರೀ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ ಶ್ರೀ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

        ಸವಿತಾ ಮಹರ್ಷಿಗಳು ಸಮಾಜದ ಮುಖಿಯಾಗಿ ಬೆಳೆದು ದಾರಿದೀಪವಾಗಿದ್ದಾರೆ. ಇಂತಹ ಮಹಾತ್ಮರ ಜಯಂತಿಗಳನ್ನು ಆಚರಿಸುವ ಮೂಲಕ ಸರ್ಕಾರ ಇವರ ಆದರ್ಶಗಳ ಹಾದಿಯಲ್ಲಿ ನಡೆಯಲು ನಮಗೆ ಬೆಳಕು ತೊರಿಸಿದೆ. ಸವಿತಾ ಸಮಾಜದ ಬಂಧುಗಳು ಮಹರ್ಷಿಗಳ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಂಘಟನೆಯಿಂದ ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಂಡು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಬೆಳೆಯಬೇಕು ಎಂದು ಕರೆ ನೀಡಿದರು.

     ವಿಶೇಷ ಉಪನ್ಯಾಸ ನೀಡಿದ ಕುಮ್ಮೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಶ್ರೀನಿವಾಸ ಎನ್.ಕರ್ನೂಲ ಅವರು ಮಾತನಾಡಿ, ಪೌರಾಣಿಕ ವ್ಯಕ್ತಿಯಾದ ಸವಿತಾ ಮಹರ್ಷಿಯು ರಥಸಮ್ತಿಯ ದಿನ ಮಾಘ ಮಾಸದ ಶುಕ್ಲ ಪಕ್ಷದಲ್ಲಿ ಜನಿಸಿದರು. ಹಿಂದು ಪುರಾಣದ ಪ್ರಕಾರ ರಥಸಪ್ತಮಿಗೆ ವಿಶೇಷವಾದ ಮಹತ್ವವಿದೆ. ಬೌಗೋಳಿಕವಾಗಿ ರಥಸಪ್ತಮಿಯ ದಿನದಂದು ಸೂರ್ಯನ ಕಿರಣಗಳು ಉತ್ತಾರಭಿಮುಖವಾಗಿ ಚಲಿಸುತ್ತವೆ. ಇಂತಹ ಮಹತ್ವದ ಘಟ್ಟದಲ್ಲಿ ಮಹರ್ಷಿಗಳು ಜನನವಾಗಿ ಶಿವಾ, ವಿಷ್ಣು, ಬ್ರಹ್ಮ ಇವರ ಮೆಚ್ಚುಗೆಯನ್ನು ಪಡೆದು ವರವನ್ನು ಪಡೆದವರಾಗಿರುತ್ತಾರೆ.

        ಧಾರ್ಮಿಕವಗಿ ಶಿವನ ಎಡಗಣ್ಣನ್ನು ಚಂದ್ರನಿಗೆ ಬಲಗಣ್ಣನ್ನು ಸೂರ್ಯನಿಗೆ ಹೊಲಿಸಲಾಗುತ್ತದೆ. ಶಿವನ ಬಲಗಣ್ಣಿನಿಂದ ಜನಿಸಿದವನೇ ಸವಿತಾ ಮಹರ್ಷಿ ಎಂದು ಪ್ರತಿತಿ ಇದೆ. ಸವಿತಾ ಸಮಾಜದವರನ್ನು ಸೂರ್ಯ ವಂಶಕ್ಕೆ ಸೇರಿದವರೆಂದು ಹೆಮ್ಮೆಯಿಂದ ಹೇಳಬಹುದು. ಅಪಾರ ಜ್ಞಾನಭಂಡಾರವನ್ನು ಹೊಂದಿದ ಸವಿತಾ ಮಹರ್ಷಿಗಳು ನಾಲ್ಕನೇ ವೇದವಾದ ಸಾಮವೇಧ ಕೃತಿಯನ್ನು ರಚಿಸಿದ್ದಾರೆ. ಇವರ ಮಗಳಾದ ಗಾಯತ್ರಿದೇವಿಯು ಶ್ರೇಷ್ಠಮಂತ್ರವಾದ ಗಾಯತ್ರಿ ಮಂತ್ರವನ್ನು ರಚಿಸಿದ್ದಾರೆ. 12ನೇ ಶತಮಾನದಲ್ಲಿ ಜಗಜ್ಯೋತಿ ಬಸವಣ್ಣನವರಿಗೆ ಆಶ್ರಯ ನೀಡಿದ ದೊರೆ ಸವಿತಾ ಸಮಾಜದ ಬಿಜ್ಜಳ ದೊರೆ ಎಂಬುದು ಹೆಮ್ಮೆಯ ಸಂಗತಿಯಾಗಿದೆ. ಅತ್ಯಂತ ಶ್ರೀಮಂತ ಪರಂಪರೆ ಇರುವ ಸವಿತಾ ಸಮಾಜ ಒಗ್ಗಟ್ಟಾಗಿ ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಇತರರಿಗೆ ಆದರ್ಶ ಪ್ರಾಯರಾಗಿ ಬೆಳೆಯಬೇಕು ಎಂದು ಕರೆ ನೀಡಿದರು.

      ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಾವೇರಿ ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ ನಾರಾಯಣ ಎನ್.ಕರ್ನೂಲ ವಹಿಸಿದ್ದರು. ಕನ್ನಡ ಮತ್ತು ಸಂಸ್ಕತಿ ಇಲಾಖೆ ಸಹಾಯಕ ನಿರ್ದೇಶಕ ಆರ್.ವಿ.ಚಿನ್ನಿಕಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಇದಕ್ಕೂ ಮುನ್ನ ನಗರದ ಪುರಸಿದ್ದೇಶ್ವರ ದೇವಸ್ಥಾನದಿಂದ ಶ್ರೀ ಸವಿತಾ ಮಹರ್ಷಿಗಳ ಭಾವಚಿತ್ರದ ಮೆರವಣಿಗೆ ಕಲಾತಂಡದೊಂದಿಗೆ ಜರುಗಿತು. ಸಮಾಜದ ವಿವಿಧ ಮುಖಂಡರು ಭಾಗವಹಿಸಿದ್ದರು

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link