ಬೆಂಗಳೂರು
ರಾಜ್ಯದ 123 ವಿಧಾನಸಭಾ ಕ್ಷೇತ್ರಗಳಲ್ಲಿ ಪರಿಶಿಷ್ಠ ಜಾತಿ ಹಾಗೂ ಪಂಗಡಗಳ ಕಾಲೋನಿಗಳ ಅಭಿವೃದ್ಧಿಗೆ ಎಸ್‍ಸಿ /ಎಸ್ಟಿ ಉಪ ಯೋಜನೆಯಡಿ ಕರ್ನಾಟಕ ಸರ್ಕಾರ 202.5 ಕೋಟಿ ರೂ. ಮುಂಜೂರು ಮಾಡಿದೆ.
ಎಸ್‍ಸಿ/ಎಸ್ಟಿ ಸಮುದಾಯ ಹೆಚ್ಚಾಗಿ ನೆಲೆಸಿರುವ ಪ್ರದೇಶಗಳಲ್ಲಿ ಕುಡಿಯುವ ನೀರು, ರಸ್ತೆ, ವಿದ್ಯುತ್, ಚರಂಡಿ ಸೇರಿದಂತೆ ಮೂಲಭೂತ ಸೌಲಭ್ಯವನ್ನು ಪ್ರಗತಿ ಯೋಜನೆಯಡಿ ಅತಿ ಶೀಘ್ರವಾಗಿ ಕಲ್ಪಿಸುವಂತೆ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿಗಳು ಆಯಾ ವಿಧಾನಸಭಾ ಕ್ಷೇತ್ರದ ಶಾಸಕರೊಂದಿಗೆ ಚರ್ಚಿಸಿ ಮುಂಜೂರು ಮಾಡಿರುವ ಹಣವನ್ನು ಎಸ್‍ಸಿ/ಎಸ್ಟಿ ಬಡವಾಣೆಗಳ ಅಭಿವೃದ್ಧಿಗೆ ಸದುಪಯೋಗ ಪಡಿಸಿಕೊಳ್ಳಬೇಕು. ಮುಂದಿನ ವರ್ಷ ಮಾರ್ಚ್ ಒಳಗಾಗಿ ಕಡ್ಡಾಯವಾಗಿ ಎಲ್ಲ ಅಭಿವೃದ್ಧಿ ಕಾರ್ಯಗಳನ್ನು ಪೂರ್ಣಗೊಳಿಸಬೇಕು ಎಂದು ಸಚಿವರು ತಿಳಿಸಿದ್ದಾರೆ.
ಪ.ಜಾತಿ ಹಾಗೂ ಪ.ಪಂಗಡ ಸಮುದಾಯ ಶೇ. 50 ರಷ್ಟು ನೆಲೆಸಿರುವ ಪ್ರದೇಶವನ್ನು ಪ್ರಗತಿ ಕಾಲೋನಿಯಡಿ ಜಿಲ್ಲಾಧಿಕಾರಿಗಳು ಆಯ್ಕೆ ಮಾಡಿಕೊಳ್ಳಬೇಕು. ನಂತರ, ಅಗತ್ಯವಿರುವ ಎಲ್ಲ ಮೂಲ ಸೌಲಭ್ಯ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕು. ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಪಂಚಾಯಿತಿ ಮೂಲಕ ಅಭಿವೃದ್ಧಿ ಕಾರ್ಯಗಳು ನಡೆಯಬೇಕು ಎಂದು ಪ್ರಿಯಾಂಕ್ ಖರ್ಗೆ ಸೂಚಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
