ದಾವಣಗೆರೆ:
ಟೈಯರ್ ಸ್ಪೋಟಗೊಂಡು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರೊಂದು ಮೂರು ಪಲ್ಟಿ ಹೊಡೆದು, ಪಕ್ಕದಲ್ಲಿದ್ದ ಗದ್ದೆಯಲ್ಲಿ ಬಿದ್ದಿರುವ ಪರಿಣಾಮ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಪಂಜಾಬಿ ಡಾಬಾದ ಬಳಿ ಭಾನುವಾರ ನಡೆದಿದೆ.
ಶಿವಕುಮಾರಸ್ವಾಮಿ ಬಡಾವಣೆಯ ನಿವಾಸಿ ಕಾರ್ತಿಕ್ (21) ಮೃತ ವಿದ್ಯಾರ್ಥಿ. ಈತ ನಗರದ ಕಾಲೇಜೊಂದರಲ್ಲಿ ಬಿಸಿಎ ವ್ಯಾಸಂಗ ಮಾಡುತ್ತಿದ್ದ. ಹರಿಹರದಿಂದ ದಾವಣಗೆರೆಗೆ ತನ್ನ ಸ್ನೇಹಿತರಾದ ಶಿವು, ದರ್ಶನ್, ಹರ್ಷ ಅವರೊಂದಿಗೆ ಸ್ಕಾರ್ಪಿಯೋ ಕಾರಿನಲ್ಲಿ ವಾಪಸ್ ಬರುತ್ತಿದ್ದರು. ಈ ವೇಳೆ ಟೈರ್ ಸ್ಪೋಟಗೊಂಡು ಚಾಲಕನ ನಿಯಂತ್ರಣಕ್ಕೆ ಸಿಗದೇ ಕಾರು ರಸ್ತೆ ವಿಭಜಕಕ್ಕೆ ಹಾಗೂ ವಿದ್ಯುತ್ ಕಂಬಕ್ಕೂ ಡಿಕ್ಕಿ ಹೊಡೆದು ಮೂರು ಪಲ್ಟಿಯಾಗಿ ಗದ್ದೆಗೆ ನುಗ್ಗಿದೆ.
ಅಪಘಾತದಿಂದ ಕಾರ್ತಿಕ್ ಗಂಭೀರವಾಗಿ ಗಾಯಗೊಂಡು ಮೃತಪಟ್ಟರೆ, ಈತನ ಮೂವರು ಸ್ನೇಹಿತರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇವರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ದಕ್ಷಿಣ ಸಂಚಾರಿ ಠಾಣೆ ಪೆÇಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ದೂರು ದಾಖಲಿಸಿಕೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
