ಹರಿಹರ 

ನಗರದ ಸಾರ್ವಜನಿಕ ಆಸ್ಪತ್ರೆಯ ಹತ್ತಿರದಲ್ಲಿರುವ ಪ್ರಭಾಕರ್ ಎಸ್. ಎಂಬುವವರಿಗೆ ಸೇರಿದೆ ಎನ್ನಲಾದ ಸುಜಿಕಿ ಸ್ವಿಜ್ ಸ್ಕೂಟರ್‍ನ್ನು ತನ್ನ ಮನೆಯ ಮುಂಭಾಗದಲ್ಲಿ ನಿಲ್ಲಿಸಲಾಗಿತ್ತು. ಶನಿವಾರ ಮಧ್ಯ ರಾತ್ರಿ ಯಾರೋ ಕಿಡಿಗೇಡಿಗಳು ಮನೆ ಎದುರು ನಿಲ್ಲಿಸಿದ್ದ ಸ್ಕೂಟರ್ ಅನ್ನು ಆಸ್ಪತ್ರೆಯ ಕಾಂಪೌಂಡು ಬಳಿ ತಗೆದುಕೊಂಡು ಹೊಗಿ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ.
ದಗದಗನೆ ಉರಿಯುತ್ತಿದ್ದ ಬೆಂಕಿಯನ್ನು ಕಂಡ ಸಾರ್ವಜನಿಕ ಆಸ್ಪತ್ರೆಯ ಸಿಬ್ಬಂದಿಗಳು ತಕ್ಷಣ ಅಲ್ಲಿನ ಅಕ್ಕ ಪಕ್ಕದ ಮನೆಯವರಿಗೆ ತಿಳಿಸಿದ್ದಾರೆ. ನಂತರ ಪ್ರಭಾಕರ್ ಮನೆಯ ಹೊರಗೆ ಬಂದು ನೊಡಿದಾಗ ತಮ್ಮದೆ ಸ್ಕೂಟರ್‍ಗೆ ಬೆಂಕಿ ಹತ್ತಿದೆ ಎಂದು ತಿಳಿದು ಕೂಡಲೇ ಅಗ್ನಿಶಾಮಕ ಸಿಬ್ಬಂದಿಗಳಿಗೆ ಕರೆ ಮಾಡಿ ಸ್ಥಳಕ್ಕೆ ಬರುವಂತೆ ಮಾಹಿತಿ ನೀಡಿದ್ದಾರೆ. ನಂತರ ಎಲ್ಲಾ ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೋಲಿಸ್ ವರಿಷ್ಠಾಧಿಕಾರಿ ಹನುಮಂತರಾಯ, ಡಿವೈಎಸ್‍ಪಿ ಮಂಜುನಾಥ್ ಗಂಗಲ್, ಸಿಪಿಐ ಶಿವಪ್ರಸಾದ್, ಪಿಎಸ್‍ಐ ಡಿ. ರವಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲಿಸಿ ತನಿಖೆ ಕೈಗೊಂಡಿದ್ದಾರೆ.
ಕೆಲವು ದಿನಗಳ ಹಿಂದೆ ಹಬ್ಬಕ್ಕೆ ಕಟ್ಟಿದ್ದ ಬಂಟಿಗ್ಸ್ ವಿಚಾರವಾಗಿ ಎರಡೂ ಗುಂಪುಗಳ ಮದ್ಯೆ ನಡೆದ ಕಹಿ ಘಟನೆ ಮಾಸುವ ಮುಂಚೆ ಈ ಘಟನೆ ನೆಡೆದಿರಿವುದು ಪೊಲಿಸ್ ಇಲಾಖೆಗೆ ತೆಲೆನೊವಾಗಿ ಪರಿಣಮಿಸಿದೆ.ಹಿಂದೂ ಜಾಗರಣ ವೇದಿಕೆ ಮುಖಂಡರಾದ ಬಿ.ಎಮ್ ವಾಗೀಶ್ ಸ್ವಾಮಿ, ಜಿಲ್ಲಾ ಸಂಚಾಲಕ ಸತೀಶ್ ಪೂಜಾರಿ, ತಾಲೂಕು ಸಂಚಾಲಕ ದಿನೇಶ್ ಹಾಗೂ ಮತ್ತಿತರರು ಪ್ರಭಾಕರ್ ಅವರ ಮನೆಗೆ ಭೇಟಿ ನೀಡಿ ಕುಂಟುಂಬದವರಿಗೆ ಧೈರ್ಯ ತುಂಬಿದರು ಎಂದು ತಿಳಿದು ಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








