ಮಂಗಳೂರು:
ವಾಯುಭಾರ ಕುಸಿತ ಹಿನ್ನೆಲೆ ಉಳ್ಳಾಲದಲ್ಲಿ ಸಮುದ್ರದ ಅಲೆಗಳು ದಡಕ್ಕೆ ಬಿರುಸಿನಿಂದ ಅಪ್ಪಳಿಸುತ್ತಿದ್ದು, ಕೈಕೋ, ಕಿಲಿರಿಯಾನಗರ, ಮೊಗವೀರಪಟ್ನ ಸಮುದ್ರ ತೀರದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.
ಸೋಮೇಶ್ವರ ದೇವಸ್ಥಾನ ಬಳಿಯ ಮೋಹನ್ ಎಂಬವರ ಮನೆಗೆ ಭಾರೀ ಅಲೆಗಳು ಅಪ್ಪಳಿಸುತ್ತಿವೆ. ಉಚ್ಚಿಲದ ಬಟ್ಟಂಪ್ಪಾಡಿ ಸಮೀಪ ನಾಲ್ಕುತೆಂಗಿನ ಮರಗಳು ಧರಾಶಾಹಿಯಾಗಿವೆ. ಪೇರಿಬೈಲ್ ಎಂಬಲ್ಲಿ ಝೊಹರಾ ಅಬ್ದುಲ್ಲ ಎಂಬವರ ಮನೆಗೂ ಸಮುದ್ರದ ದೈತ್ಯ ಅಲೆಗಳು ಅಪ್ಪಳಿಸುತ್ತಿವೆ. ಜೋರಾಗಿ ಬೀಸುತ್ತಿರುವ ಗಾಳಿಯ ಪರಿಣಾಮವಾಗಿ ಕಡಲ್ಕೊರೆತ ಉಂಟಾಗಿ ಅಲ್ಲಿ ನಿರ್ಮಿಸಲಾಗಿದ್ದ ತಾತ್ಕಾಲಿಕ ತಡೆಗೋಡೆ ಸಮುದ್ರಪಾಲಾಗುತ್ತಿದೆ. ಉಚ್ಚಿಲದ ಬಟ್ಟಂಪ್ಪಾಡಿ ಸಮೀಪ ನಾಲ್ಕುತೆಂಗಿನ ಮರಗಳು ಧರಾಶಾಯಿಯಾಗಿದೆ.








