ಕುಣಿಗಲ್
ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಗೊಲ್ಲರಹಟ್ಟಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಕೋಲಾಟ ಸ್ಪರ್ಧೆಯಲ್ಲಿ ಭಾಗವಹಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವ ಬಗ್ಗೆ ಶಾಲೆಯ ಮುಖ್ಯ ಶಿಕ್ಷಕಿ ಎಮ್.ಸಿ.ಲೀಲಾವತಿ ಹಾಗೂ ಗ್ರಾಮಸ್ಥರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ತಾಲ್ಲೂಕಿನ ಯಡಿಯೂರು ಹೋಬಳಿ ಹಣೆ ಗೊಲ್ಲರಹಟ್ಟಿ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ತುಮಕೂರಿನ ಸಿದ್ದಗಂಗಾ ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕೋಲಾಟ ಸ್ಪರ್ಧೆಯಲ್ಲಿ ಭಾಗವಹಿಸಿ ಆರು ತಾಲ್ಲೂಕುಗಳಿಂದ ಬಂದಿದ್ದಂತಹ ವಿದ್ಯಾರ್ಥಿಗಳೊಂದಿಗೆ ಸೆಣಸಾಡಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ತಾಲ್ಲೂಕಿಗೆ ಮತ್ತು ಹಣೆಗೊಲ್ಲರಹಟ್ಟಿ ಶಾಲೆಗೆ ಕೀರ್ತಿ ತಂದಿದ್ದಾರೆ ಎಂದು ಮುಖ್ಯ ಶಿಕ್ಷಕಿ ಎಮ್.ಸಿ.ಲೀಲಾವತಿ ತಿಳಿಸಿದ್ದು, ಈ ಹಿಂದೆಯು ಇಲ್ಲಿನ ಹಲವು ಮಕ್ಕಳು ಕ್ರೀಡೆ ಹಾಗೂ ವಿದ್ಯಾಭ್ಯಾಸದಲ್ಲಿ ಉತ್ತಮ ಸಾಧನೆ ಮಾಡಿ ಇಂದು ಅತ್ಯುತ್ತಮ ಜೀವನ ನಡೆಸುತ್ತಿದ್ದಾರೆ. ಆದ್ದರಿಂದ ಸರ್ಕಾರಿ ಶಾಲೆಗಳು ಯಾವುದೇ ಖಾಸಗಿ ಶಾಲೆಗಳಿಗೇನು ಕಡಿಮೆ ಇಲ್ಲಾ ಎಂಬುದನ್ನ ಮನಗಾಣಬಹುದೆಂದು ಇಲ್ಲಿನ ಪೋಷಕರಿಗೆ ಕಿವಿಮಾತು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
