ಬೆಂಗಳೂರು:
ಸಾಲಮನ್ನಾ ಕುರಿತಂತೆ ರೈತರಿಂದ ಸ್ವಯಂ ದೃಢೀಕರಣ ಪತ್ರ ಪಡೆಯುವ ಅವಧಿಯನ್ನು ಈ ತಿಂಗಳ 31ರ ವರೆಗೆ ವಿಸ್ತರಿಸಿದ್ದು, ಸಾಲ ಪಾವತಿಗೆ ಒತ್ತಾಯ ಹೇರಬಾರದು ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸಹಕಾರ ಸಂಸ್ಥೆಗಳು ಮತ್ತು ಬ್ಯಾಂಕ್‍ಗಳಿಗೆ ನಿರ್ದೇಶನ ನೀಡಿದ್ದಾರೆ.
ರಾಜ್ಯದ ರೈತರು ಸಹಕಾರ ಸಂಘ, ಸಹಕಾರ ಬ್ಯಾಂಕ್‍ಗಳಿಂದ ಪಡೆದಿರುವ ಅಲ್ಪಾವಧಿ ಸಾಲದ ಮೊತ್ತಕ್ಕೆ ಸಂಬಂಧಿಸಿದಂತೆ ಸಾಲಮನ್ನಾ ಯೋಜನೆಯಲ್ಲಿ ಫಲಾನುಭವಿ ರೈತರನ್ನು ಗುರುತಿಸಲು ಜುಲೈ 10ಕ್ಕೆ ಹೊರಬಾಕಿ ಹೊಂದಿರುವ ಎಲ್ಲ ಸಾಲದ ಖಾತೆಗಳಿಗೆ ಸಂಬಂಧಿಸಿದಂತೆ ಪ್ರತಿ ಕುಟುಂಬದ ಮುಖ್ಯಸ್ಥನಿಂದ ಕಡ್ಡಾಯವಾಗಿ ಸಾಲಮನ್ನಾ ಅರ್ಜಿ ಸ್ವಯಂ ದೃಢೀಕರಣ ಪತ್ರವನ್ನು ಪಡೆಯಲು ಈ ಹಿಂದೆ ನಮೂನೆಯನ್ನು ನೀಡಲಾಗಿತ್ತು. ಮುಖ್ಯಮಂತ್ರಿ ಅವರ ಸೂಚನೆಯ ಮೇರೆಗೆ ಸರಳೀಕರಣಗೊಳಿಸಿರುವ ಅರ್ಜಿ ಸಲ್ಲಿಕೆಯ ಅವಧಿಯನ್ನು ಈ ತಿಂಗಳ 31ರ ವರೆಗೆ ವಿಸ್ತರಿಸಲಾಗಿದೆ ಎಂದು ಮುಖ್ಯಮಂತ್ರಿ ಕಾರ್ಯಾಲಯದ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ