ಎಂ.ಬಿ.ಪಾಟೀಲ್ ಲೆಟರ್ ಹೆಡ್ ನಕಲು: ಹಿರಿಯ ಪತ್ರ ಕರ್ತನ ಬಂಧನ ..!!

ಬೆಂಗಳೂರು

      ಗೃಹ ಸಚಿವ ಎಂ.ಬಿ.ಪಾಟೀಲ್ ಲೆಟರ್ ಹೆಡ್ ನಕಲು ಮಾಡಿದ ಪ್ರಕರಣ ಸಂಬಂಧ ಹಿರಿಯ ಪತ್ರಕರ್ತ ಹೇಮಂತ್ ಕುಮಾರ್‍ನನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.

      ಪ್ರಕರಣದ ಸಂಬಂಧ ಈಗಾಗಲೇ ಪೋಸ್ಟ್ ಕಾರ್ಡ್ ಪತ್ರಿಕೆ ಸಂಪಾದಕ ಮಹೇಶ್ ವಿಕ್ರಮ್ ಹೆಗ್ಡೆಯ ಬಂಧನವಾಗಿತ್ತು. ವಿಚಾರಣೆ ವೇಳೆ ಹೇಮಂತ್ ಕುಮಾರ್ ಸಲಹೆಯಂತೆ ನಕಲಿ ಲೆಡರ್ ಹೆಡ್ ರಚಿಸಲಾಯಿತು ಎಂದು ಮಹೇಶ್ ಹೆಗ್ಡೆ ತಿಳಿಸಿದ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆ ಹೇಮಂತ್ ಕುಮಾರ್‍ನನ್ನು ಸಿಐಡಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

      ಈ ಮಧ್ಯೆ ಪತ್ರಕರ್ತ ಹೇಮಂತ್‍ಕುಮಾರ್ ಅವರ ಬಂಧನವನ್ನು ಖಂಡಿಸಿರುವ ರಾಜ್ಯ ಬಿಜೆಪಿ ಶಾಸಕರು ಮುಖಂಡರ ನಿಯೋಗ ಶನಿವಾರ ರಾಜ್ಯ ಪೊಲೀಸ್ ಮಹಾನಿರ್ದೇಶಕರನ್ನು ಭೇಟಿ ಮಾಡಿ ದೂರು ಸಲ್ಲಿಸಿ ಕೂಡಲೇ ಹೇಮಂತ್‍ಕುಮಾರ್ ಅವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿದೆ.

        ಪತ್ರಕರ್ತ ಹೇಮಂತ್‍ಕುಮಾರ್ ಅವರ ಬಂಧನ ಖಂಡನಾರ್ಹ. ಗೃಹ ಸಚಿವ ಎಂ.ಬಿ. ಪಾಟೀಲ್ ರವರ ಒತ್ತಡಕ್ಕೆ ಮಣಿದು ಪೆÇಲೀಸರು ಪೂರ್ವಾಗ್ರಹಪೀಡಿತರಾಗಿ ವರ್ತಿಸುತ್ತಿರುವುದು ಸರಿಯಲ್ಲ. ಕೂಡಲೇ ಪತ್ರಕರ್ತ ಹೇಮಂತ್‍ಕುಮಾರ್ ರವರನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದೆ ಒತ್ತಾಯಿಸಿದೆ.

      ಪೆÇಲೀಸ್ ನಿರ್ದೇಶಕರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂಗೆ ಮಾತನಾಡಿದ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಅರವಿಂದಲಿಂಬಾವಳಿ, ರಾಜ್ಯದ ಗೃಹ ಇಲಾಖೆ ಗೃಹಮಂತ್ರಿ ಎಂ.ಬಿ. ಪಾಟೀಲ್ ರವರ ಮೂಗಿನ ನೇರಕ್ಕೆ ನಡೆದುಕೊಳ್ಳುತ್ತಿದೆ. ಇದೇ ರೀತಿ ಅವರು ತಮ್ಮ ವರ್ತನೆಯನ್ನು ಮುಂದುವರೆಸಿದರೆ ಕೇಂದ್ರದ ಗೃಹ ಇಲಾಖೆಗೆ ದೂರು ನೀಡುವುದಾಗಿ ಹೇಳಿದರು.

      ಪ್ರಧಾನಿ ನರೇಂದ್ರಮೋದಿ ಅವರನ್ನು ಗುಂಡಿಕ್ಕಿ ಕೊಲೆ ಮಾಡಿ ಎಂದು ಹೇಳಿದ ಮಾಜಿ ಶಾಸಕ ಗೋಪಾಲಕೃಷ್ಣ ಅವರ ವಿರುದ್ಧ ದೂರು ನೀಡಿದರೂ ಕ್ರಮ ಕೈಗೊಂಡಿಲ್ಲ. ಹಾಗೆಯೇ ಸಚಿವ ಜಮೀರ್ ಅಹಮದ್ ಖಾನ್ ಸೇರಿದಂತೆ ಪ್ರಧಾನಿ ವಿರುದ್ಧ ಕೆಟ್ಟದಾಗಿ ಮಾತನಾಡಿದ್ದ ಕಾಂಗ್ರೆಸ್ ನಾಯಕರ ವಿರುದ್ಧವೂ ಕ್ರಮ ಆಗಿಲ್ಲ. ಆದರೆ ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟಕ್ಕೆ ಸಂಬಂಧಿಸಿದಂತೆ ಮಾತನಾಡಿದ ಪತ್ರಕರ್ತ ಹೇಮಂತ್‍ಕುಮಾರ್ ರವರನ್ನು ರಾತ್ರೋರಾತ್ರಿ ಬಂಧಿಸಿರುವುದು ಖಂಡನಾರ್ಹ ಎಂದು ಅವರು ಹೇಳಿದರು. ರಾಜ್ಯದ ಗೃಹ ಇಲಾಖೆಯಲ್ಲಿ ಸಚಿವ ಎಂ.ಬಿ. ಪಾಟೀಲ್ ಅವರ ಹಸ್ತಕ್ಷೇಪ ಹೆಚ್ಚಿದೆ ಎಂದು ಅವರು ಕಿಡಿಕಾರಿದರು.

       ನಿಯೋಗದಲ್ಲಿ ರಾಜ್ಯ ಬಿಜೆಪಿಯ ಪ್ರಧಾನ ಕಾರ್ಯದರ್ಶಿಗಳಾದ ಅರವಿಂದ ಲಿಂಬಾವಳಿ, ಎನ್. ರವಿಕುಮಾರ್, ಶಾಸಕ ಎಸ್. ಸುರೇಶ್‍ಕುಮಾರ್, ವಕ್ತಾರರಾದ ಅಶ್ವತ್ಥ್‍ನಾರಾಯಣ್, ಸಹ ವಕ್ತಾರ ಎ.ಹೆಚ್. ಆನಂದ್ ಅವರಿದ್ದರು

ಏನಿದು ಪ್ರಕರಣ

       ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರವಾಗಿ ಗೃಹ ಸಚಿವ ಎಂ.ಬಿ.ಪಾಟೀಲ್ ಅವರು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ ಎನ್ನುವ ರೀತಿಯಲ್ಲಿ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿತ್ತು. ಬಳಿಕ ಈ ಪತ್ರವು ವೈರಲ್ ಆಗಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಈ ಪತ್ರವನ್ನು ನಾನು ಬರೆದಿಲ್ಲ. ಯಾರೋ ಉದ್ದೇಶಪೂರ್ವಕವಾಗಿ ಹೀಗೆ ಮಾಡಿದ್ದಾರೆ ಎಂದು ಆರೋಪಿಸಿ ಗೃಹ ಸಚಿವರು ವಿಜಯಪುರದ ಆದರ್ಶನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ನಂತರ ಈ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿತ್ತು.ಪ್ರಕರಣದ ತನಿಖೆ ಕೈಗೊಂಡ ಸಿಐಡಿ ಅಧಿಕಾರಿಗಳು ಪೋಸ್ಟ್ ಕಾರ್ಡ್ ಪತ್ರಿಕೆ ಸಂಪಾದಕ ಮಹೇಶ್ ವಿಕ್ರಮ್ ಹೆಗ್ಡೆ ಬಂಧಿಸಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link
Powered by Social Snap