ಮಧುಗಿರಿ:
ನಿಷ್ಪಕ್ಷಪಾತವಾಗಿ ಹಾಗೂ ಪ್ರಾಮಾಣಿಕವಾಗಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸುವ ಉದ್ದೇಶದಿಂದ ಎಲ್ಲಾ ಕೇಂದ್ರಗಳಲ್ಲಿ ಸಿಸಿ ಟಿವಿಗಳನ್ನು ಆಳವಡಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರವಿಶಂಕರರೆಡ್ಡಿ ತಿಳಿಸಿದರು.ಪಟ್ಟಣದ ಸಿದ್ದಾರ್ಥ ಪಿಯು ಕಾಲೇಜಿನಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಮುಖ್ಯ ಅಧೀಕ್ಷಕ ಹಾಗೂ ಪ್ರಶ್ನೆ ಪತ್ರಿಕೆ ಪಾಲಕರ ಸಭೆಯಲ್ಲಿ ಮಾತನಾಡಿದ ಅವರು ಈ ಬಾರಿಯ ಫಲಿತಾಂಶದಲ್ಲಿ ಮಧುಗಿರಿ ಶೈಕ್ಷಣಿಕ ಜಿಲ್ಲೆಯನ್ನು ಮೊದಲನೆಯ ಸ್ಥಾನಕ್ಕೆ ತರುವ ನಿಟ್ಟಿನಲ್ಲಿ ಶಿಕ್ಷಕರು ಕಾರ್ಯ ನಿರ್ವಹಿಸಬೇಕಾಗಿದೆ ಇಲಾಖೆಯ ವತಿಯಿಂದ ಪರೀಕ್ಷೆ ನಡೆಸಲು ಸಕಲ ಸಿದ್ಧತೆಗಳನ್ನು ಮಾಡಿಕೂಳ್ಳಲಾಗಿದೆ ವಿಶೇಷವಾಗಿ ಪರೀಕ್ಷಾರ್ಥಿಗಳಿಗೆ ಅನೂಕೂಲ ಮಾಡಿಕೊಡುವ ಉದ್ದೇಶದಿಂದ ಈ ವರ್ಷ ಆರೋಗ್ಯ ಇಲಾಖೆಯಿಂದ ನರ್ಸಗಳು, ಶುದ್ದ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯಗಳಂತಹ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ ಎಂದರು.
ಬಿಇಒ ರಂಗಪ್ಪ ಮಾತನಾಡಿ ಪರೀಕ್ಷಾ ಕಾರ್ಯವೂ ಪವಿತ್ರವಾದ ಕೆಲಸವಾಗಿದ್ದು, ಪ್ರತಿಯೊಬ್ಬರು ಕೂಡ ಪ್ರಾಮಾಣಿಕವಾಗಿ ಹಾಗೂ ಸಮಯ ಪ್ರಜ್ಞೆ ಯಿಂದ ತಮ್ಮ ಕೆಲಸಗಳನ್ನು ಮಾಡಬೇಕಾಗಿದೆ ಪರೀಕ್ಷೆಗಳ ಸಂಧರ್ಭದಲ್ಲಿ ಸ್ವಲ್ಪ ಎಡವಿದರೂ ಕೂಡ ಅಪರಾಧಗಳನ್ನು ಎಸಗಿದಂತಾಗುತ್ತದೆ ಎಂದರು.ಕಾರ್ಯಕ್ರಮದಲ್ಲಿ ಬಿಇಒಗಳಾದ ಗಂಗಾಧರ್, ಸಿದ್ದಗಂಗಯ್ಯ, ರಾಮಯ್ಯ, ಡಿವೈಪಿಸಿ ರಾಜ್ ಕುಮಾರ್ ಹಾಗೂ ಶಿಕ್ಷಣಾಧಿಕಾರಿ ಅಶ್ವಥನಾರಾಯಣ ವಿಷಯ ಪರಿವೀಕ್ಷಕ ಮೋಹನ್‍ಕುಮಾರ್, ಎಲ್ಲಾ ತಾಲೂಕುಗಳ ನೋಡಲ್ ಅಧಿಕಾರಿಗಳು ಹಾಗೂ ಪರೀಕ್ಷ ಕೇಂದ್ರಗಳ ಮುಖ್ಯ ಅಧೀಕ್ಷಕರು ಮತ್ತು ಪ್ರಶ್ನೆ ಪತ್ರಿಕೆ ಪಾಲಕರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
