ಗುಬ್ಬಿ
ತಾಲೂಕಿನ ನಿಟ್ಟೂರು ಹೋಬಳಿ ದೊಡ್ಡಗುಣಿ ಕೆರೆ ಏರಿಯ ಮೇಲೆ ಕಾರು, ದ್ವಿಚಕ್ರ ವಾಹನ ಹಾಗೂ ಕ್ಯಾಂಟರ್ ವಾಹನದ ನಡುವೆ ಸಂಭವಿಸಿದ ಅಫಘಾತದಲ್ಲಿ ದ್ವಿಚಕ್ರ ವಾಹನ ಹಾಗೂ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.
ದೊಡ್ಡಗುಣಿ ಕೆರೆ ಏರಿಯ ಮೇಲೆ ಬಹಳ ತಿರುವಿನ ಜಾಗವಿದ್ದು ಅತಿ ವೇಗವಾಗಿ ಬಂದ ಕಾರು ಕ್ಯಾಂಟರ್ ಮತ್ತು ದ್ವಿಚಕ್ರ ವಾಹನ ಡಿಕ್ಕಿ ಸಂಭವಿಸಿದ್ದು ಡಿಕ್ಕಿಯ ರಭಸಕ್ಕೆ ಬೆಂಕಿ ಕಾಣಿಸಿಕೊಂಡಿದ್ದು ಕಾರು ಹಾಗೂ ದ್ವಿಚಕ್ರ ವಾಹನ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಬೆಂಕಿ ಸಣ್ಣ ಪ್ರಮಾಣದಲ್ಲಿ ಕಾಣಿಸಿಕೊಳ್ಳುತ್ತಿದ್ದಂತೆ ಸ್ಥಳಿಯರು ಕಾರಿನಲ್ಲದ್ದವರನ್ನು ಹೊರಗೆ ಎಳೆದುಕೊಂಡಿದ್ದಾರೆ ಕ್ಷಣಾರ್ಧದಲ್ಲಿ ಕಾರು ಮತ್ತು ಬೈಕ್ ಬೆಂಕಿಯ ಕೆನ್ನಾಲಿಗೆಗೆ ತುತ್ತಾಗಿವೆ. ಯಾವುದೆ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ. ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ