9ಜಿಲ್ಲೆಗಳಲ್ಲಿ ಸೇವಾ ಕ್ಲಸ್ಟರ್ ಅಭಿವೃದ್ಧಿಗೆ ಕ್ರಮ : ಜಗದೀಶ್ ಶೆಟ್ಟರ್

ಬೆಂಗಳೂರು

    ಬಹು ನಿರೀಕ್ಷಿತ ಕ್ಲಸ್ಟರ್ ಅಭಿವೃದ್ಧಿ ಯೋಜನೆಯನ್ನು 9 ಜಿಲ್ಲೆಗಳಲ್ಲಿ ಅನುಷ್ಠಾನಗೊಳಿಸಿ ಕೈಗಾರಿಕೆಗಳನ್ನು ಸ್ಥಾಪಿಸಲು ಪೂರಕವಾದ ವಾತಾವರಣ ಸೃಷ್ಠಿಸಲಾಗುವುದು ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

     ನಗರದಲ್ಲಿ ಆರಂಭವಾಗಿರುವ ಸೇವಾ ಕ್ಲಸ್ಟರ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯಸರ್ಕಾರ ಆಯುಷ್, ನ್ಯಾಚುರಾಪತಿ, ಇತರೆ ಯೋಗಕ್ಷೇಮ ಕ್ಷೇತ್ರಗಳನ್ನು ಒಂದೇ ಕಡೆ ದೊರೆಯುವಂತೆ ಮಾಡಲು ಮುಂದಾಗಿದೆ ಎಂದರು.

    ರಾಜ್ಯಸರ್ಕಾರ ಜಾರಿಗೊಳಿಸಿರುವ ಮತ್ತು ರೂಪಿಸಿರುವ ಕಾರ್ಯತಂತ್ರಗಳು ಸ್ಥಳೀಯ ಕೈಗಾರಿಕೆಗಳ ಅಭಿವೃದ್ಧಿಗೆ ಪೂರಕವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸೇವಾಕ್ಲಸ್ಟರ್‌ಗಳನ್ನು ಆರಂಭಿಸಿ ಇವುಗಳ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಅವರು ಹೇಳಿದ್ದಾರೆ.ಸರ್ಕಾರ ಡಿಜಿಟಲೀಕರಣಕ್ಕೆ ಒತ್ತು ನೀಡಿದ್ದು, ಗ್ರಾಮಾಂತರ ಪ್ರದೇಶಗಳಲ್ಲಿ ಮೊಬೈಲ್-ಎಟಿಎಂ ಸೌಲಭ್ಯಗಳನ್ನು ಕಲ್ಪಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.

    ಮುಖ್ಯಕಾರ್ಯದರ್ಶಿ ವಿಜಯ ಭಾಸ್ಕರ್ ಮಾತನಾಡಿ, ಸೇವಾವಲಯದಲ್ಲಿ ಮತ್ತಷ್ಟು ಪ್ರಗತಿ ಸಾಧಿಸಲು ಕರ್ನಾಟಕ ಮುಂದಾಗಿದೆ. ಸದ್ಯದಲ್ಲೇ ಹೊಸ ಮಾಹಿತಿ ತಂತ್ರಜ್ಞಾನ ನೀತಿ ಪ್ರಕಟಿಸಲಾಗುವುದು ಎಂದರು.ಕಾರ್ಯಕ್ರಮದಲ್ಲಿ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯುಷ್ ಗೋಯಲ್, ರಾಜ್ಯ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನಕಾರ್ಯದರ್ಶಿ ಗೌರವ್ ಗುಪ್ತಾ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link