ಚಿತ್ರದುರ್ಗ:
ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಂ.ಎ.ಸೇತೂರಾಂ ಬಿಜೆಪಿ.ಗೆ ಸೇರ್ಪಡೆಯಾಗಿದ್ದಾರೆ.ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ಬಿಜೆಪಿ.ಜಿಲ್ಲಾಧ್ಯಕ್ಷ ಕೆ.ಎಸ್.ನವೀನ್ ಇವರುಗಳು ಎಂ.ಎ.ಸೇತೂರಾಂರವರನ್ನು ಬಿಜೆಪಿ.ಕಚೇರಿಯಲ್ಲಿ ಪಕ್ಷಕ್ಕೆ ಬರಮಾಡಿಕೊಂಡರು.
ದೇಶದ ಪ್ರಧಾನಿ ನರೇಂದ್ರಮೋದಿರವರ ಪಾರದರ್ಶಕ ಆಡಳಿತ, ತತ್ವಸಿದ್ದಾಂತ, ದೇಶಭಕ್ತಿ ಹಾಗೂ ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಭಯೋತ್ಪಾದಕರು ನಮ್ಮ ದೇಶದ 44 ಯೋಧರನ್ನು ಹತ್ಯೆಗೈದಾಗ ತೆಗೆದುಕೊಂಡು ದಿಟ್ಟ ಕ್ರಮವನ್ನು ಮೆಚ್ಚಿ ಬಿಜೆಪಿ.ಗೆ ಸೇರ್ಪಡೆಯಾಗಿದ್ದು, ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ.ಅಭ್ಯರ್ಥಿ ಗೆಲುವಿಗೆ ಪ್ರಾಮಾಣಿವಾಗಿ ಶ್ರಮಿಸುವುದಾಗಿ ಎಂ.ಎ.ಸೇತೂರಾಂ ಭರವಸೆ ನೀಡಿದರು.
ಹಿರಿಯೂರು ಶಾಸಕಿ ಪೂರ್ಣಿಮ ಶ್ರೀನಿವಾಸ್, ವಿಧಾನಪರಿಷತ್ ಮಾಜಿ ಸದಸ್ಯ ಡಾ.ಎ.ಎಚ್.ಶಿವಯೋಗಿಸ್ವಾಮಿ, ವಿಭಾಗೀಯ ಸಹ ಪ್ರಭಾರಿ ಜಿ.ಎಂ.ಸುರೇಶ್, ಚಿತ್ರದುರ್ಗ ಲೋಕಸಭಾ ಚುನಾವಣಾ ಉಸ್ತುವಾರಿ ಟಿ.ಜಿ.ನರೇಂದ್ರನಾಥ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮುರಳಿ, ರತ್ನಮ್ಮ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.