ಶ್ರೀಗಳ ಪುಣ್ಯ ಸ್ಮರಣೆ: ರಕ್ಷಣಾ ವ್ಯವಸ್ಥೆಗೆ ಪರಿಶಿಲನೆ…!!!

ತುಮಕೂರು

       ಜನವರಿ 31ರಂದು ನಡೆಯಲಿರುವ ಲಿಂಗೈಕೆ ಡಾ|| ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ 11 ದಿನಗಳ ಪುಣ್ಯ ಸ್ಮರಣಾ ಕಾರ್ಯಕ್ರಮಕ್ಕೆ ಪೊಲೀಸ್ ಇಲಾಖೆ ವತಿಯಿಂದ ಸೂಕ್ತ ರಕ್ಷಣಾ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ಕೇಂದ್ರ ವಲಯ ಐ.ಜಿ.ಪಿ ದಯಾನಂದ್ ತಿಳಿಸಿದರು.

       ಶ್ರೀಗಳ ಪುಣ್ಯ ಸ್ಮರಣಾ ಕಾರ್ಯಕ್ರಮದ ಅಂಗವಾಗಿ ಸಿದ್ಧಗಂಗಾ ಮಠಕ್ಕೆ ಆಗಮಿಸಿದ ಅವರು ಗೋಸಲ ಸಿದ್ಧೇಶ್ವರ ವೇದಿಕೆ ಮುಂಭಾಗ ಸಜ್ಜುಗೊಳ್ಳುತ್ತಿರುಯವ ವೇದಿಕೆ ಮತ್ತು ಇನ್ನಿತರೆ ಭಕ್ತರು ಆಗಮಿಸುವ ಸ್ಥಳವನ್ನು ಪರಿಶೀಲಿಸಿದರು.

        ಪುಣ್ಯ ಸ್ಮರಣಾ ಕಾರ್ಯಕ್ರಮಕ್ಕೆ ಈಗಾಗಲೇ ಮಠದಿಂದ ಎಲ್ಲಾ ಸಿದ್ದತೆಗಳು ನಡೆಯುತ್ತಿದ್ದು ಭಕ್ತಾಧಿಗಳು ಶ್ರೀಗಳ ಗದ್ದುಗೆಯ ದರ್ಶನ ಪಡೆಯುವುದರ ಜೊತೆಗೆ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕೆ ಅನುವಾಗುವಂತೆ ದಾಸೋಹದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

         ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸುವ ಭಕ್ತರಿಗೆ ಗದ್ದುಗೆ ದರ್ಶನ, ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗುವುದು. ಭಕ್ತಾಧಿಗಳ ಹೆಚ್ಚಳದ ಆಧಾರದ ಮೇರೆಗೆ ಮಾರ್ಗ ಬದಲಾವಣೆ ಮಾಡಲಾಗುವುದು. ಬರುವ ಭಕ್ತಾಧಿಗಳಿಗೆ ಯಾವುದೇ ಅನಾನುಕೂಲವಾಗದಂತೆ ಸೂಕ್ತ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ||ಕೋನ ವಂಶಿಕೃಷ್ಣ, ಹೆಚ್ಚುವರಿ ಪೊಲೀಸ್ ಅಧೀಕ್ಷರಾದ ಶೋಭಾರಾಣಿ ಮತ್ತಿತರು ಉಪಸ್ಥಿತರಿದ್ದರು.
 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link