ಮಂಗಳೂರು ಬಾಂಬ್ ಬ್ಲಾಸ್ಟ್ ಪ್ರಕರಣ: ಆದಿತ್ಯನ ಬ್ಯಾಂಕ್ ಲಾಕರ್ ಪರಿಶೀಲನೆ

ಉಡುಪಿ

   ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟಗೊಳಿಸಲು ಸ್ಕೆಚ್ ಹಾಕಿದ್ದ ಮಣಿಪಾಲ ಮೂಲದ ಅದಿತ್ಯ ರಾವ್ ಅವರ ತನಿಖೆ ಮುಂದುವರೆದಿದೆ. ಪೊಲೀಸರು ಆತನ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.

   ಎಸಿಪಿ ಬೆಳ್ಳಿಯಪ್ಪ ನೇತೃತ್ವದ ತಂಡದಿಂದ ಉಡುಪಿಯ ಕರ್ಣಾಟಕ ಬ್ಯಾಂಕ್ ನಲ್ಲಿ ಪರಿಶೀಲನೆ ಮಾಡಿದ್ದು, ಬ್ಯಾಂಕ್ ಲಾಕರ್ ನಿಂದ ಹಲವು ಅನುಮಾನಾಸ್ಪದ ವಸ್ತುಗಳು ವಶಕ್ಕೆ ತೆಗೆದುಕೊಳ್ಳಲಾಗಿದೆ.ಬಾಂಬರ್ ಆದಿತ್ಯ ರಾವ್ ವಿಮಾನ ನಿಲ್ದಾಣ ಸ್ಪೋಟಿಸಲು ಒಂದು ವರ್ಷದ ಹಿಂದೆಯಿಂದ ತಯಾರಿ ಮಾಡಿಕೊಂಡಿದ್ದನಂತೆ. ತನಿಖೆಯ ವೇಳೆ ಹಲವು ವಿಷಯಗಳನ್ನು ಬಹಿರಂಗಪಡಿಸಿದ್ದಾನೆ.

    ಉಡುಪಿಯ ಕಡಿಯಾಳಿಯಲ್ಲಿರುವ ಕರ್ಣಾಟಕ ಬ್ಯಾಂಕ್ ಗೆ ಪೊಲೀಸರು ಆದಿತ್ಯ ರಾವ್ ನನ್ನು ಕರೆತಂದಿದ್ದಾರೆ. ವಿಮಾನ ನಿಲ್ದಾಣಕ್ಕೆ ಬಾಂಬ್ ಇಡುವ ಮೊದಲು ಉಡುಪಿಯ ಬ್ಯಾಂಕ್ ಲಾಕರ್ ನಲ್ಲಿ ಕೆಲವು ವಸ್ತುಗಳನ್ನು ಇಟ್ಟಿದ್ದಾನೆಂದು ತಿಳಿದುಬಂದಿದೆ

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ