ನಟ ರವಿ ಪ್ರಕಾಶ್ ವಿರುದ್ಧ ಲೈಂಗಿಕ ಕಿರುಕುಳದ ದೂರು ನೀಡಿದ ವಿಜಯಲಕ್ಷ್ಮಿ…!!!

0
25

ಬೆಂಗಳೂರು

         ಆನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟಿ ವಿಜಯಲಕ್ಷ್ಮಿ ಅವರಿಗೆ ನಟನೊಬ್ಬ ಲೈಂಗಿಕ ಕಿರುಕುಳ ನೀಡುತ್ತಿರುವ ದೂರು ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ..ನಟ ರವಿಪ್ರಕಾಶ್ ವಿರುದ್ಧ ನಟಿ ವಿಜಯಲಕ್ಷ್ಮೀ ಅವರು ಲೈಂಗಿಕ ಕಿರುಕುಳದ ಆರೋಪವನ್ನು ಮಾಡಿ ನೀಡಿರುವ ದೂರು ಆಧರಿಸಿ ಪ್ರಕರಣ ದಾಖಲಿಸಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

       ನಾನು ಕಳೆದ ಕೆಲ ದಿನಗಳಿಂದ ಆನಾರೋಗ್ಯ ಸಮಸ್ಯೆಯಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಯುತ್ತಿದ್ದೇನೆ. ಹಣಕಾಸಿನ ನೆರವು ನೀಡಿ ಅಂತ ಸ್ಯಾಂಡಲ್‍ವುಡ್‍ನ ಸ್ಟಾರ್ ನಟರಿಗೆ ಮನವಿ ಮಾಡಿಕೊಂಡಿದ್ದೆ. ಇದನ್ನು ನೋಡಿದ ನಟ ರವಿಪ್ರಕಾಶ್ ಫೆಬ್ರವರಿ 27ರಂದು ಮಲ್ಯ ಆಸ್ಪತ್ರೆಗೆ ಭೇಟಿ ನೀಡಿ, ಒಂದು ಲಕ್ಷ ನಗದು ಸೇರಿದಂತೆ ಅವಶ್ಯವಿರುವ ಬಟ್ಟೆ, ಊಟ, ತಿಂಡಿ ಸೇರಿದಂತೆ ಅವಶ್ಯಕ ವಸ್ತುಗಳನ್ನು ನೀಡಿದ್ದರು

       ಇದಾದ ಬಳಿಕ ಪ್ರತಿದಿನ ಆಸ್ಪತ್ರೆಯ ಐಸಿಯೂಗೆ ಬರುವುದು, ಪದೇ ಪದೇ ಫೋನ್, ಮಸೇಜ್ ಮಾಡಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ನಟಿ ವಿಜಯಲಕ್ಷ್ಮೀ ದೂರಿನಲ್ಲಿ ಆರೋಪಿಸಿದ್ದಾರೆ.

      ತನ್ನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ವಿಚಾರ ತಿಳಿದ ನಟ ರವಿಪ್ರಕಾಶ್ ಮಾಧ್ಯಮಗಳಲ್ಲಿ ಸಹಾಯ ಮಾಡಿ ಎಂದು ವಿಜಯಲಕ್ಷ್ಮೀ ಮನವಿ ಮಾಡುತ್ತಿರುವುದನ್ನು ನೋಡಿ ಒಂದು ಲಕ್ಷ ಹಣ ಸಹಾಯ ಮಾಡಿದೆ. ಅವರಿಗೆ ಹಾಕೋಕೆ ಬಟ್ಟೆ ಸಹ ಇರಲಿಲ್ಲ. ಮಾನವೀಯತೆ ಆಧಾರದಲ್ಲಿ ಊಟ, ಬಟ್ಟೆ, ಹಣ್ಣು, ಮಾತ್ರೆ ಹೀಗೆ ಸಹಾಯ ಮಾಡಿದೆ.

       ಅವರ ಬಳಿ ಮಾತಾಡಿರುವ ಕಾಲ್ ರಿಕಾರ್ಡ್, ಮಸೇಜ್‍ಗಳು,ಎಲ್ಲವೂ ಇದೆ. ನನಗೆ ಯಾವುದೇ ಕೆಟ್ಟಭಾವನೆ ಇಲ್ಲ. ಕಷ್ಟದಲ್ಲಿದ್ದಾರೆ ಎಂದು ಸಹಾಯ ಮಾಡಿದ್ದೆ ತಪ್ಪಾಗಿದೆ ಎಂದು ನಟ ರವಿ ಪ್ರಕಾಶ್ ಹೇಳಿದ್ದಾರೆ. ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರ ತನಿಖೆ ನಡೆಸುತ್ತಿದ್ದಾರೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

LEAVE A REPLY

Please enter your comment!
Please enter your name here