ತೇಜಸ್ವಿ ಸೂರ್ಯ ವಿರುದ್ಧ ಲೈಂಗಿಕ ಕಿರುಕುಳ ಆರೋಪ…!!

ಬೆಂಗಳೂರು

         ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಸೋಮ್ ದತ್ತ ಮಾತ್ರವಲ್ಲದೇ ಇತರ ಇಬ್ಬರು ಯುವತಿಯರ ಮೇಲೂ ಲೈಂಗಿಕ ಕಿರುಕುಳ ಎಸಗಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

         ತೇಜಸ್ವಿ ಸೂರ್ಯ ವಿರುದ್ಧ ಸೋಮ್ ದತ್ತ ಅವರು ನೀಡಿರುವ ಲೈಂಗಿಕ ಕಿರುಕುಳ ಸಂಬಂಧದ ಆಡಿಯೋವನ್ನು ಬಿಡುಗಡೆ ಮಾಡಿ ಮಾತನಾಡಿರು ಪಕ್ಷದ ವಕ್ತಾರ ಬ್ರೀಜೇಶ್ ಕಾಳಪ್ಪ ಅವರು ಸೋಮ್ ದತ್ತ ಅವರ ಮೇಲೆ ಲೈಂಗಿಕ ಕಿರುಕುಳ ನಡೆಸಿದ ಆರೋಪಗಳು ಕೇಳಿ ಬಂದರೂ ಬಿಜೆಪಿ ನಾಯಕರು ಇವರೆಗೂ ಕ್ರಮಕೈಗೊಂಡಿಲ್ಲ ಎಂದು ದೂರಿದರು.

        ತೇಜಸ್ವಿ ಸೂರ್ಯ ಅವರಿಗೆ ಟಿಕೆಟ್ ನೀಡುವ ಮೊದಲೇ ಈ ವಿಷಯ ಬಿಜೆಪಿ ನಾಯಕರಿಗೆ ಗೊತ್ತಿತ್ತು. 3 ಮಹಿಳೆಯರಿಗೆ ಅನ್ಯಾಯವಾಗಿದ್ದರೂ ಬಿಜೆಪಿ ನಾಯಕರು ಯಾವುದೇ ಕ್ರಮಕೈಗೊಂಡಿಲ್ಲ .

          ತೇಜಸ್ವಿ ಸೂರ್ಯ ಅವರು ಸಲ್ಲಿಸಿದ ಪ್ರಮಾಣ ಪತ್ರದಲ್ಲಿ ಸೋಮ ದತ್ತ ನೀಡಿರುವ ಕ್ರಿಮಿನಲ್ ದೂರಿನ ಬಗ್ಗೆ ಯಾವುದೇ ಉಲ್ಲೇಖ ಇಲ್ಲ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸುತ್ತೇವೆ ಎಂದು ಅವರು ಹೇಳಿದರು.

        ಲೈಂಗಿಕ ಕಿರುಕುಳ ಬಗ್ಗೆ ಸೋಮದತ್ತ ಅವರು ಕೋರಮಂಗಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಎಫ್.ಐಆರ್. ಕೂಡ ಆಗಿದೆ. ಈ ಎಲ್ಲಾ ವಿಚಾರಗಳು ಬಿಜೆಪಿ ನಾಯಕರಿಗೆ ಗೊತ್ತಿದ್ದರೂ ಯಾರು ತುಟ್ಟಿ ಬಿಚ್ಚುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link