ಶಾಲಾ ದಾಖಲಾತಿ ಆಭಿಯಾನ..!!!

ಹುಳಿಯಾರು:

     ತಾಲ್ಲೂಕಿನಲ್ಲಿನ ಸರ್ಕಾರಿ ಶಾಲೆಗಳು ಗುಣಮಟ್ಟ ಮತ್ತು ಮೌಲ್ಯಾಧಾರಿತ ಶಿಕ್ಷಣ ನೀಡುವಲ್ಲಿ ಸಿದ್ದವಿದ್ದು, ಪೋಷಕರು ತಮ್ಮ ಮಕ್ಕಳನ್ನು ಸ್ಥಳೀಯ ಸರ್ಕಾರಿ ಶಾಲೆಗಳಿಗೆ ಸೇರಿಸುವ ಮೂಲಕ ಅವರ ಭವಿಷ್ಯ ಉಜ್ವಲಗೊಳಿಸಬೇಕಾಗಿದೆ ಎಂದು ದಸೂಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಮುಖ್ಯ ಶಿಕ್ಷಕ ಮಹಾಲಿಂಗಪ್ಪ ತಿಳಿಸಿದರು.

     ಹುಳಿಯಾರು ಹೋಬಳಿಯ ದಸೂಡಿಯಲ್ಲಿ ಏರ್ಪಡಿಸಿದ್ದ ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಿ ಎಂಬ ದಾಖಲಾತಿ ಆಂದೋಲನದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

     ಸರ್ಕಾರಿ ಶಾಲೆಯಲ್ಲಿ ಮಕ್ಕಳ ಶಿಕ್ಷಣಕ್ಕೆ ಪೂರಕವಾದ ಎಲ್ಲಾ ವಾತಾವರಣವನ್ನು ನಿರ್ಮಿಸಿದ್ದು, ಪೋಷಕರು ನಿರ್ಭಿತಿಯಿಂದ ದಾಖಲಿಸಬಹುದಾಗಿದೆ. ಸಮಾಜದಲ್ಲಿ ಬದುಕಲು ಬೇಕಾಗುವ ಎಲ್ಲಾ ಸಾಮಥ್ರ್ಯಗಳನ್ನು ಕಲಿಸುವ ಜೊತೆಗೆ ಶೈಕ್ಷಣಿಕ ಬೆಳವಣಿಗೆ ನೀಡುತ್ತದೆ. ಇದರಿಂದ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದು ಹೇಳಿದರು.ಶಿಕ್ಷಕರಾದ ಕುಮಾರ್, ಎಸ್‍ಡಿಎಂಸಿ ಅಧ್ಯಕ್ಷ ನಾಗಣ್ಣ, ಗಿರೀಶ್ ಮತ್ತಿತರರು ಭಾಗವಹಿಸಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap