ತುಮಕೂರು
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಮೇ 9ರಂದು ಬೆಳಿಗ್ಗೆ 10:30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ “ಶ್ರೀ ಶಂಕರಾಚಾರ್ಯರ ಜಯಂತಿ”ಯನ್ನು ಸರಳವಾಗಿ ಆಚರಿಸಲಾಗುವುದು. ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಎಲ್ಲಾ ಇಲಾಖಾ ಅಧಿಕಾರಿಗಳು, ಸಿಬ್ಬಂದಿ ವರ್ಗದವರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಭಾಗವಹಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಸವರಾಜಪ್ಪ ಆಪಿನಕಟ್ಟೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
