ಆದಿಜಾಂಬವ ಸಮುದಾಯ ಭವನಕ್ಕೆ ಶಂಕುಸ್ಥಾಪನೆ

ಹಿರಿಯೂರು :

        ಆದಿಜಾಂಬವ ಸಮುದಾಯದವರು ತಮ್ಮ ಹಕ್ಕುಗಳ ರಕ್ಷಣೆಗಾಗಿ ಸಂಘಟಿತರಾಗುವ ಅಗತ್ಯವಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಸಲಹೆ ನೀಡಿದರು.

         ನಗರದ ಪ್ರವಾಸಿ ಮಂದಿರ ವೃತ್ತದ ಸಮೀಪ ಇರುವ ಆದಿಜಾಂಬವ ಮಠದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆದಿಜಾಂಬವ ಸಮುದಾಯ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

       ಗ್ರಾಮೀಣ ಪ್ರದೇಶದ ಪೋಷಕರು ತಮ್ಮ ಮಕ್ಕಳನ್ನು ಕೃಷಿ ಕೆಲಸ, ಕೂಲಿ ಕೆಲಸಗಳಿಗೆ ಹಚ್ಚದೆ ಶಾಲೆಗೆ ಕಳಿಸಿ ವಿದ್ಯಾವಂತರನ್ನಾಗಿಸಬೇಕು ಸಮುದಾಯ ಭವನ ರಾಷ್ಟ್ರೀಯ ಹೆದ್ದಾರಿ 4ಕ್ಕೆ ಹೊಂದಿಕೊಂಡಿರುವ ಕಾರಣ ಸಮುದಾಯದ ಜನರಿಗೆ ಅನುಕೂಲವಾಗಿದೆ. 3 ತಿಂಗಳಲ್ಲಿ ಕಾಮಗಾರಿ ಮುಗಿಸಬೇಕು ಎಂದು ಗುತ್ತಿಗೆದಾರರಿಗೆ ತಾಕೀತು ಮಾಡಿದರು.

       ಈ ಕಾರ್ಯಕ್ರಮದ ನೇತೃತ್ವವನ್ನು ಆದಿಜಾಂಬವಮಠದ ಪೀಠಾಧ್ಯಕ್ಷ ಬ್ರಹ್ಮಾನಂದಮುನಿ ಸ್ವಾಮೀಜಿ ವಹಿಸಿದ್ದರು. ನಗರಸಭಾ ಅಧ್ಯಕ್ಷೆ ಮಂಜುಳಾ, ಮಠದ ಕಾರ್ಯಾಧ್ಯಕ್ಷ ಒ.ಅನಂತರಾಮಯ್ಯ, ಜಂಟಿ ಕಾರ್ಯದರ್ಶಿ ಎಂ.ಡಿ.ರವಿ, ಖಜಾಂಚಿ ಆಲೂರುಕಾಂತಯ್ಯ, ದೇವಯ್ಯ, ಸಾನಂದಮುನಿ, ಕೆ.ಗಣೇಶ್, ಸ್ವಾಮೀಜಿ ದಾಸ್, ಗುರುಶ್ಯಾಮಯ್ಯ, ಬಬ್ಬೂರುಪರಮೇಶ್ವರಪ್ಪ ಇತರರು ಉಪಸ್ಥಿತರಿದ್ದರು

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link