ಜೂ.16 ರಂದು ಶಾರದಾ ಪುರಸ್ಕಾರ-2019.

ದಾವಣಗೆರೆ:

    ಇಲ್ಲಿನ ಶ್ರೀಮತಿ ಪ್ರೇಮಾ ಅರುಣಾಚಲ ಎನ್.ರೇವಣಕರ್ ಪ್ರತಿಷ್ಠಾನದ ವತಿಯಿಂದ, ಎಸ್ಸೆಸ್ಸೆಲ್ಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದು ತೇರ್ಗಡೆಯಾಗಿರುವ ದೈವಜ್ಞ ಬ್ರಾಹ್ಮಣ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ ಜೂ.16ರಂದು ಬೆಳಿಗ್ಗೆ 10.30ಕ್ಕೆ ನಗರದ ಶ್ರೀಮತಿ ಗೌರಮ್ಮ ನರಹರಿ ಶೇಟ್ ಸಭಾ ಭವನದದಲ್ಲಿ “ಶಾರದಾ ಪುರಸ್ಕಾರ-2019” ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ ಏರ್ಪಡಿಸಲಾಗಿದೆ.

     ಈ ಕುರಿತು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರತಿಷ್ಠಾನದ ಗಣೇಶ್ ಶಣೈ, ಈ ಸಮಾರಂಭವನ್ನು ಹಿರಿಯ ಸಾಹಿತಿ ಡಾ.ಹೇಮಾ ಪಟ್ಟಣಶೆಟ್ಟಿ ಉದ್ಘಾಟಿಸಲಿದ್ದಾರೆ. ಪ್ರತಿಷ್ಠಾನದ ಸಂಸ್ಥಾಪಕ ಡಾ.ನಲ್ಲೂರು ಅರುಣಾಚಲ ಎನ್. ರೇವಣಕರ್ ಅಧ್ಯಕ್ಷತೆ ವಹಿಸಲಿದ್ದಾರೆ.

      ಮುಖ್ಯ ಅತಿಥಿಗಳಾಗಿ ಯುವ ಸಾಹಿತಿ ಶ್ರೀಧರ ಶೇಟ್ ಶಿರಾಲಿ, ಗೋವಾ ರಾಜ್ಯದ ರೇವಣದ ಶ್ರೀವಿಮಲೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಪೂರ್ಣಾನಂದ ಪ್ರಭು ದೇಸಾಯಿ, ದೈವಜ್ಞ ಬ್ರಾಹ್ಮಣ ಸಮಾಜದ ಅಧ್ಯಕ್ಷ ಸತ್ಯನಾರಾಯಣ ಆರ್. ರಾಯ್ಕರ್ ಭಾಗವಹಿಸಲಿದ್ದಾರೆ. ಶ್ರೀಮತಿ ಗೌರಮ್ಮ ನರಹರಿಶೇಟ್ ರೇವಣಕರ್ ಪ್ರತಿಷ್ಠಾನದ ಗೌರವಾಧ್ಯಕ್ಷೆ ನಲ್ಲೂರು ಯಮುನಾಬಾಯಿ ಶಾಂತಾರಾಮ್ ರೇವಣಕರ್, ಪ್ರತಿಷ್ಠಾನದ ಅಧ್ಯಕ್ಷೆ ಪ್ರೇಮಾ ಅರುಣಾಚಲ ಎನ್. ರೇವಣಕರ್ ಉಪಸ್ಥಿತರಿರಲಿದ್ದಾರೆಂದು ಮಾಹಿತಿ ನೀಡಿದರು.

       ರಾಜ್ಯದ 23 ಜಿಲ್ಲೆಗಳಿಂದ ಸುಮಾರು 100 ಜನ ಪ್ರತಿಭಾವಂತ ವಿದ್ಯಾರ್ಥಿಗಳು ಈ ಬಾರಿ ಶಾರದ ಪುರಸ್ಕಾರ ಪಡೆಯುತ್ತಿದ್ದು, ಇವರಿಗೆ ಕನ್ನಡ ಕಂಕಣಕಟ್ಟಿ, ಕನ್ನಡಾರತಿ ಬೆಳಗಿ, ಕನ್ನಡ ತಿಲಕವಿಟ್ಟು, ಮಂಗಳವಾದ್ಯ, ಪೂರ್ಣಕುಂಭ ಸ್ವಾಗತದ ಮೆರವಣಿಗೆಯಲ್ಲಿ ಕರೆತಂದು, ವೇದಿಕೆಯ ಪ್ರತ್ಯೇಕವಾಗಿ ಮಂಟಪದ ಸಿಂಹಾಸನದಲ್ಲಿ ಕೂರಿಸಿ, ಪುಷ್ಪವೃಷ್ಟಿ ಯೊಂದಿಗೆ ಮಸ್ತಕದ ಮೇಲೆ ಕಿರೀಟವಿಟ್ಟು, ಸ್ಮರಣಿಕೆ, ಚಿನ್ನದ ಲೇಪನದ ಪದಕ ಹಾಗೂ ಸನ್ಮಾನಪತ್ರ ನೀಡಿ ಗೌರವಿಸಲಾಗುವುದು ಎಂದು ಅವರು ವಿವರಿಸಿದರು.

       ಇದೇ ಸಂದರ್ಭದಲ್ಲಿ ಮಕ್ಕಳ ನಡೆ-ನುಡಿ ಸಂಸ್ಕಾರಕ್ಕಾಗಿ ಪ್ರತಿಜ್ಞಾವಿಧಿ ಬೋಧಿಸಲಾಗುವುದು. ಅಲ್ಲದೇ, ಅರುಣಾಚಲ ಎನ್.ರೇವಣಕರ್ ಅವರು ಸಂಗ್ರಹಿಸಿರುವ ಹಳೇಯ ಮತ್ತು ಹೊಸ ನಾಣ್ಯಗಳ, ವಿದೇಶಿ ಕರೆನ್ಸಿ ಮತ್ತು ಹಳೇಯ ಶೈಲಿಯ ಆಭರಣಗಳನ್ನು ಪ್ರದರ್ಶನಕ್ಕೆ ಇಡಲಾಗುವುದು ಎಂದು ಹೇಳಿದರು.ಸುದ್ದಿಗೋಷ್ಠಿಯಲ್ಲಿ ಪ್ರತಿಷ್ಠಾನದ ಸಂಸ್ಥಾಪಕ ಅರುಣಾಚಲ ಎನ್.ರೇವಣಕರ್, ಅಧ್ಯಕ್ಷೆ ಪ್ರೇಮಾ ಅರುಣಾಚಲ ಎನ್.ರೇವಣಕರ್, ನಲ್ಲೂರು ಲಕ್ಷ್ಮಣರಾವ್ ಹಾಜರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap