ಹಾವೇರಿ :
ನಗರದ ಬಸವ ಕೇಂದ್ರ ಶ್ರೀ ಹೊಸಮಠದಲ್ಲಿ ಲಿಂ. ಜಗದ್ಗುರು ಶ್ರೀ. ನೈಘಂಟಿನ ಸಿದ್ದಬಸವ ಮುರುಘರಾಜೇಂದ್ರ ಶ್ರೀಗಳ ಹಾಗೂ ಶ್ರೀ ಮುರುಘೇಂದ್ರ ಮಹಾಶಿವಯೋಗಿಗಳವರ ಸ್ಮರಣೋತ್ಸವ ನಿಮಿತ್ಯ ಶರಣ ಸಂಸೃತಿ ಉತ್ಸವ-2018 ರ ಅಂಗವಾಗಿ ಸೈಕಲ್ ಜಾಥಾ ಕಾರ್ಯಕ್ರಮವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಪರಶುರಾಮ ಸೈಕಲ್ ಚಾಲನೆ ಮಾಡುವ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಹೊಸಮಠದ ಬಸವಶಾಂತಲಿಂಗ ಶ್ರೀಗಳು, ಉತ್ಸವದ ಅಧ್ಯಕ್ಷ ಪ್ರಕಾಶ ಶೆಟ್ಟಿ, ಕಾರ್ಯಾಧ್ಯಕ್ಷ ಮೃತ್ಯುಂಜಯ ತುರಕಾಣಿ, ಇಂದುಧರ ಯರೇಸಿಮಿ, ನಾಗೇಂದ್ರ ಕಟಕೋಳ, ಚಂದ್ರಶೇಖರ ಶಿಶುನಳ್ಳಿ, ರಾಜೇಂದ್ರ ಸಜ್ಜನರ, ಪರಮೇಶಪ್ಪ ಮೆಗಳಮನಿ, ಜಯದೇವ ಕೆರೂಡಿ ಸೇರಿದಂತೆ ಇತರರಿದ್ದರು.
ಸೈಕಲ್ ಜಾಥಾ ಹೊಸಮಠದಿಂದ ಪ್ರಾರಂಭವಾಗಿ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕಾಗಿನೆಲೆ ರಸ್ತೆಯಲ್ಲಿರುವ ಮುರುಘಾಮಠದಲ್ಲಿ ಮುಕ್ತಾಯವಾಯಿತು. ಈ ಜಾಥಾದಲ್ಲಿ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ