ಧಾರವಾಡ:
ರಾಜ್ಯದಲ್ಲಿ ಕನ್ನಡವೇ ಸಾರ್ವಭೌಮ ಭಾಷೆಯಾಗಿರಬೇಕು ಮತ್ತು ಪ್ರಾಥಮಿಕ ಶಿಕ್ಷಣ ಕನ್ನಡ ಮಾಧ್ಯಮದಲ್ಲಿ ನಡೆಯಬೇಕೇ ಹೊರತು ಇಂಗ್ಲಿಷ್ ಮಾಧ್ಯಮದಲ್ಲಿ ಅಲ್ಲ. ಸರ್ಕಾರದ ಈ ನಿರ್ಧಾರಕ್ಕೆತಮ್ಮ ವಿರೋಧವಿದೆಎಂದುಕನ್ನಡ ಪರ ಹೋರಾಟಗಾರ, ನಾಡೋಜ ಪಾಟೀಲ ಪುಟ್ಟಪ್ಪ ಹೇಳಿದ್ದಾರೆ.
ನಾಳೆಯಿಂದ ಧಾರವಾಡದಲ್ಲಿ 84ನೇ ಅಖಿಲ ಭಾರತಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರ ಮಾಧ್ಯಮಿಕ ಶಾಲಾ ಹಂತದಿಂದ ಒಂದು ಭಾಷೆಯಾಗಿ ಇಂಗ್ಲಿಷ್ ಕಲಿಸಲು ಯಾರ ವಿರೋಧವೂ ಇಲ್ಲ, ಆದರೆ, ಕನ್ನಡ ಮಾಧ್ಯಮದ ಬದಲು, ಇಂಗ್ಲಿಷ್ ಮಾಧ್ಯಮದಲ್ಲಿ ಕಲಿಸುವ ನಿರ್ಧಾರ ಸರ್ವಥಾ ಸಲ್ಲ ಎಂದರು. ಸರ್ಕಾರ ಈ ವಿಚಾರದಲ್ಲಿ ಮೊಂಡುತನ ಮಾಡಿದಲ್ಲಿ, ಗೋಕಾಕ್ ಮಾದರಿಯ ಹೋರಾಟಕ್ಕೆ ಅಣಿಯಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೂಡ ಈ ಕುರಿತು ಸ್ಪಷ್ಟವಾದ ನಿರ್ಣಯ ಕೈಗೊಳ್ಳಬೇಕು ಎಂದುಅವರು ಆಗ್ರಹಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ