ನವದೆಹಲಿ:

ರಾಷ್ಟ್ರ ರಾಜಧಾನಿಯಲ್ಲಿ ಕಾಂಗ್ರೆಸ್ ಆರು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದ್ದು, ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದಿಕ್ಷಿತ್ ಅವರು ಈಶಾನ್ಯ ದೆಹಲಿ ಕ್ಷೇತ್ರದಿಂದ ದೆಹಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ ವಿರುದ್ಧ ಸ್ಪರ್ಧಿಸಲಿದ್ದಾರೆ.
ನವದೆಹಲಿ ಕ್ಷೇತ್ರದಿಂದ ಅಜಯ್ ಮಾಕೇನ್, ಚಾಂದಿನಿ ಚೌಕ್ ನಿಂದ ಜೆಪಿ ಅಗರವಾಲ್, ಪೂರ್ವ ದೆಹಲಿಯಿಂದ ಅರವಿಂದರ್ ಸಿಂಗ್ ಲೊವೆಲ್ಲೆ ವಾಯುವ್ಯ ದೆಹಲಿಯಿಂದ ರಾಜೇಶ್ ಲಿಲೋತಿಯಾ ಹಾಗೂ ಪಶ್ಚಿಮ ದೆಹಲಿಯಿಂದ ಮಹಬಲ್ ಮಿಶ್ರಾ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.
ರಾಷ್ಟ್ರ ರಾಜಧಾನಿಯಲ್ಲಿ ಆಮ್ ಆದ್ಮಿ ಪಕ್ಷದೊಂದಿಗೆ ಕಾಂಗ್ರೆಸ್ ಮೈತ್ರಿ ಮಾತುಕತೆ ಮುರಿದುಬಿದ್ದ ಬೆನ್ನಲ್ಲೇ ‘ಕೈ’ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
