ಬೆಂಗಳೂರು
ಪ್ರಾಥಮಿಕ ಪ್ರೌಢ ಹಾಗೂ ಪದವಿ ಪೂರ್ವ ಶಿಕ್ಷಕರ ಉಪನ್ಯಾಸಕರ ಹಾಗೂ ಸಿಬ್ಬಂದಿ ವರ್ಗದವರ ವರ್ಗಾವಣೆ ಪ್ರಕ್ರಿಯೆಗೆ ಸೂಕ್ತ ಆದೇಶ ಹೊರಡಿಸುವಂತೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಮಾಜಿ ಸಚಿವ ಬಸವರಾಜ ಹೊರಟ್ಟಿ ಮನವಿ ಮಾಡಿದ್ದಾರೆ.
ಕಳೆದ ಮೂರು ವರ್ಷಗಳಿಂದ ಚುನಾವಣಾ ಪ್ರಕ್ರಿಯೆ ಹಾಗೂ ಶಿಕ್ಷಣ ಇಲಾಖೆಯ ತಪ್ಪು ನಿರ್ಧಾರಗಳಿಂದಾಗಿ ಶಿಕ್ಷಕರ, ಉಪನ್ಯಾಸಕರ ಹಾಗೂ ಸಿಬ್ಬಂದಿ ವರ್ಗದವರ ವರ್ಗಾವಣೆ ನಡೆದಿರುವುದಿಲ್ಲ. ಕೂಡಲೇ ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಪ್ರಕ್ರಿಯೆಯನ್ನು ಪ್ರತೀ ವರ್ಷ ಮೇ ತಿಂಗಳ ಅಂತ್ಯದೊಳಗಾಗಿ ಮುಗಿಸಬೇಕೆಂಬುದು ಶಿಕ್ಷಕರ ಬೇಡಿಕೆಯಾಗಿದೆ. ಆದರೆ ಪ್ರತೀ ವರ್ಷ ಇಲಾಖೆಯು ವೇಳಾಪಟ್ಟಿ ಪ್ರಕಟಿಸಿ ವರ್ಗಾವಣೆ ನಡೆಸದೇ ಇರುವುದರಿಂದ ಶಿಕ್ಷಕರು ಮಾನಸಿಕವಾಗಿ ಹತಾಶರಾಗಿದ್ದಾರೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.
ಈ ವರ್ಷದ ವರ್ಗಾವಣೆ ಪ್ರಕ್ರಿಯೆಗೆ ಚುನಾವಣೆ ಆಯೋಗ ಅನುಮತಿ ನೀಡಿದ್ದು, ಇಲಾಖೆಯ ವರ್ಗಾವಣಾ ವೇಳಾಪಟ್ಟಿ ಪ್ರಕಟಿಸಲು ಯಾವುದೇ ನಿರ್ಬಂಧ ಇರುವುದಿಲ್ಲ. ಹೀಗಾಗಿ ಕೂಡಲೇ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ ನೀಡಿ ಜೂನ್ ಅಂತ್ಯದೊಳಗೆ ಪ್ರಕ್ರಿಯೆ ಮುಗಿಸಬೇಕೆಂದು ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ