ಚಳ್ಳಕೆರೆ
ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರುಗಳ ಕಾಲ್ಪನಿಕ ಬಡ್ತಿ ಸೇರಿದಂತೆ ಹಲವಾರು ಬೇಡಿಕೆಗಳ ಬಗ್ಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯೆ ತೋರಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಧರಣಿ ನಿರತ ಉಪನ್ಯಾಸಕ ಸಂಘದ ಪದಾಧಿಕಾರಿಗಳನ್ನು ಭೇಟಿ ನೀಡಿ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ಧಾರೆಂದು ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷ ಎಸ್.ಲಕ್ಷ್ಮಣ್ ತಿಳಿಸಿದ್ಧಾರೆ.
ಈ ಬಗ್ಗೆ ಪತ್ರಿಕೆಗೆ ಮಾಹಿತಿ ನೀಡಿದ ಅವರು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಎಸ್.ಆರ್.ಶ್ರೀನಿವಾಸ್ ಧರಣಿ ನಿರತರನ್ನು ಭೇಟಿ ಮಾಡಿ ಮಾತು ಕಥೆ ನಡೆಸಿ ಉಪನ್ಯಾಸಕರ ಬೇಡಿಕೆಗಳು ನ್ಯಾಯಯುತವಾಗಿದ್ದು, ಇವುಗಳನ್ನು ಈಡೇರಿಸುವ ನಿಟ್ಟಿನಲ್ಲಿ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸಂಘದ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಭರವಸೆ ನೀಡಿದ್ದು, ಉಪನ್ಯಾಸಕರು ತಮ್ಮ ಮುಷ್ಕರವನ್ನು ವಾಪಾಸ್ ಪಡೆದು ಕೆಲಸಕ್ಕೆ ಮರಳುವಂತೆ ಮನವಿ ಮಾಡಿದ್ಧಾರೆ. ಈ ಹಿನ್ನೆಲೆಯಲ್ಲಿ ಧರಣಿ ನಿರತ ಎಲ್ಲಾ ಉಪನ್ಯಾಸಕರು ಶಿಕ್ಷಣ ಸಚಿವರ ಭರವಸೆ ಮೇರೆಗೆ ತಾತ್ಕಾಲಿಕವಾಗಿ ಧರಣಿಯನ್ನು ಹಿಂಪಡೆದು ಕೆಲಸಕ್ಕೆ ಮರಳುತ್ತಿದ್ದು, ಮಾನ್ಯ ಶಿಕ್ಷಣ ಸಚಿವರು ತಾವು ನೀಡಿದ ಭರವಸೆಯನ್ನು ಈಡೇರಿಸುವಂತೆ ಒತ್ತಾಯಿಸಿದ್ಧಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ