ಹೊನ್ನಾಳಿ:
ತಾಲೂಕಿನ ಅರಬಗಟ್ಟೆ ಗ್ರಾಮದ ಶ್ರೀ ತರಳಬಾಳು ಸಮುದಾಯ ಭವನದ ನಿವೇಶನದ ಬಳಿ ಶಿವೈಕ್ಯ ಡಾ. ಶಿವಕುಮಾರ ಮಹಾಸ್ವಾಮೀಜಿ ಪುಣ್ಯಾರಾಧನೆಯನ್ನು ಜ.31ರಂದು ಬೆಳಿಗ್ಗೆ 11ಕ್ಕೆ ಹಮ್ಮಿಕೊಳ್ಳಲಾಗಿದೆ.
ಅರಬಗಟ್ಟೆ ಗ್ರಾಮದ ಸಾಧು ಲಿಂಗಾಯತ ಸಮಾಜ, ಹಾಲುಮತ ಸಮಾಜ, ತರಳಬಾಳು ಯುವ ವೇದಿಕೆ, ತುಮಕೂರಿನ ಶ್ರೀ ಸಿದ್ಧಗಂಗಾ ಮಠದಲ್ಲಿ ಓದಿದ ಹಳೆಯ ವಿದ್ಯಾರ್ಥಿಗಳ ಸಹಯೋಗದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಶಿವೈಕ್ಯ ಡಾ. ಶಿವಕುಮಾರ ಮಹಾಸ್ವಾಮೀಜಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಗುವುದು. ಗುರುವಾರ ಇಡೀ ದಿನ ಭಜನೆ ಹಾಗೂ ಭಕ್ತಿ ಗೀತೆಗಳ ಗಾಯನ ಕಾರ್ಯಕ್ರಮ ನಡೆಯಲಿದೆ. ಆಗಮಿಸಿದ ಎಲ್ಲರಿಗೂ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಅಗಲಿದ ಮಹಾನ್ ಚೇತನಕ್ಕೆ ನಮಿಸಬೇಕು ಎಂದು ಸಾಧು ಲಿಂಗಾಯತ ಸಮಾಜದ ಅಧ್ಯಕ್ಷ, ಗೋವಿನಕೋವಿ ವಿಎಸ್ಸೆಸ್ಸೆನ್ ಮಾಜಿ ಅಧ್ಯಕ್ಷ ಕೆ.ಜಿ. ಬಸವರಾಜಪ್ಪ ಮತ್ತು ಅರಬಗಟ್ಟೆ ಗ್ರಾಮದ ಹಾಲುಮತ ಸಮಾಜ, ತರಳಬಾಳು ಯುವ ವೇದಿಕೆ ಮುಖಂಡರು ವಿನಂತಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
