ಹಾವೇರಿ :
ತಾಲೂಕಿನ ದೇವಗಿರಿ, ವರದಾಹಳ್ಳಿ, ಮತ್ತು ನಾಗನೂರ ಗ್ರಾಮಗಳಲ್ಲಿ ಬಿಜೆಪಿ ಪಕ್ಷದ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶಿವಕುಮಾರ ಉದಾಸಿ ಪಾದಯಾತ್ರೆ ಮಾಡಿ ಮತಯಾಚನೆ ಮಾಡಿದರು. ಶಾಸಕರಾದ ವಿರುಪಾಕ್ಷಪ್ಪ ಬಳ್ಳಾರಿ, ಬಿ.ಜೆ.ಪಿ. ಜಿಲ್ಲಾ ಅಧ್ಯಕ್ಷರಾದಶಿವರಾಜ ಸಜ್ಜನರ, ಜಿ.ಪಂ.ಸದಸ್ಯರಾದ ವಿರುಪಾಕ್ಷಪ್ಪ ಕಡ್ಲಿ, ಬ್ಯಾಡಗಿ ತಾಲೂಕ ಬಿ.ಜೆ.ಪಿ. ಅಧ್ಯಕ್ಷರಾದ ಶಂಕರಣ್ಣ ಮಾತನವರ, ತಾ.ಪಂ. ಸದಸ್ಯ ಸತೀಶ ಸಂದಿಮನಿ ಪಕ್ಷದ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








