ಬಳ್ಳಾರಿ
ಜಿಲ್ಲಾಡಳಿತದ ವತಿಯಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರದಂದು ಸರಳವಾಗಿ ಆಚರಣೆ ಮಾಡಲಾಯಿತು.ಲೋಕಸಭಾ ಚುನಾವಣಾ 2019ರ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರು ವುದರಿಂದ ಜಿಲ್ಲಾಧಿಕಾರಿ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರು ಭಾವಚಿತ್ರಕ್ಕೆ ಪೂಜೆ ಹಾಗೂ ಪುಷ್ಪ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸತೀಶ್ ಕುಮಾರ್ ಎಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ್.ಬಿ, ಸಹಾಯಕ ಆಯುಕ್ತ ರಮೇಶ್ ಪಿ.ಕೋನರೆಡ್ಡಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ್ ದಾಸಪ್ಪನವರ್, ಸಮಾಜದ ಮುಖಂಡರು ಸೇರಿದಂತೆ ಗಣ್ಯವ್ಯಕ್ತಿಗಳು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
